ಶಹಾಬಾದ: ಕಾಂಗ್ರೆಸ್ ಪಕ್ಷವು ತ್ಯಾಗ, ಬಲಿದಾನದ ಮೂಲಕ ಕಟ್ಟಿದಂತಹ ಪಕ್ಷವಾಗಿದೆ.ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಕಾಂಗ್ರೆಸ್ ಮಹನೀಯರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ ಎಂದು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹೇಳಿದರು.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಖ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ತ್ತು ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.ಇದು ಕೆಲವೇ ಜನರ ಪಕ್ಷವಲ್ಲ. ಇದೊಂದು ದೇಶದ ಜನರೇ ನಡೆಸುತ್ತಿರುವ ಪಕ್ಷವಾಗಿz.ಎಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕಾರ್ಯಕರ್ತರನ್ನು ಹುರಿದುಂಬಿಸಿ ಆಡಳಿತ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತ ಚುಕ್ಕಾಣಿ ಹಿಡಿಯುವಂತೆ ಶ್ರಮಿಸಬೇಕಾಗಿದೆ ಎಂದರು.
ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ ಚವ್ಹಾಣ ಮಾತನಾಡಿ, ಬ್ರಿಟಿಷರಿಂದ ದೇಶವನ್ನು ಮುಕ್ತ ಮಾಡುವಾಗಲೂ ನಮ್ಮ ನಾಯಕರು ತಮ್ಮ ಜೀವನವನ್ನೇ ಬಲಿದಾನ ಮಾಡಿದ್ದಾರೆ.ಬಿಜೆಪಿಯವರು ನಮ್ಮ ದೇಶ, ನಾವು ಹಿಂದೂ ಎನ್ನುವ ಹೆಸರಿನಲ್ಲಿ ರಾಜಕೀಯ ಮಾಡಿ ಜನರಲ್ಲಿರುವ ಒಗ್ಗಟ್ಟು ಒಡೆಯುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ ಎಂದು ಹೇಳಿದರು.
ಮುಖಂಡರಾದ ಹಾಷಮಖಾನ,ಸೂರ್ಯಕಾಂತ ಕೋಬಾಳ,ತಿಪ್ಪಣ್ಣ ನಾಟೇಕಾರ,ಡಾ.ಅಹ್ಮದ್ ಪಟೇಲ್,ಶರಣು ಪಗಲಾಪೂರ,ಫಜಲ್ ಪಟೇಲ್, ಶಿವಕುಮಾರ ನಾಟೇಕಾರ,ಹರೀಶ ಕರಣಿಕ್, ನಾಗಣ್ಣ ರಾಂಪೂರೆ, ಇಮ್ರಾನ್, ಜಾವೀದ್,ಇಮ್ಯಾನುವೆಲ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…