ಹೆಳವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

0
91

ಕಲಬುರಗಿ: ಜಿಲ್ಲೆಯ ಅಲೆಮಾರಿ  ಹೆಳವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಖಿಲ ಕರ್ನಾಟಕ ಹೆಳವ ಸಮಾಜ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.

ಸಮಾಜದ ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ ಮಾತನಾಡಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದಂತ ಜಿಲ್ಲೆಯ ಅಲೆಮಾರಿ ಸಮುದಾಯದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಳವ ಸಮಾಜದ ವತಿಯಿಂದ ಅಭಿನಂದನೆಗಳನ್ನು ತಿಳಿಸುತ್ತಾ, 2020-21 ನೇ ಸಾಲಿನಲ್ಲಿ ನಡೆದ 10ನೇ ತರಗತಿಯಲ್ಲಿ ಶೇ. 75 ಹಾಗೂ ಪಿ.ಯು.ಸಿ ಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅಗಸ್ಟ್ 20ರ ಒಳಗೆ  ಅರ್ಜಿಗಳನ್ನು ಸಲ್ಲಿಸಬೇಕು ಎಂದರು.

Contact Your\'s Advertisement; 9902492681

ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ (ಮೊ. 9901301254), ಸಾಯಬಣ್ಣ ಹೆಳವರ (ಮೊ. 9900836221) ಹಾಗೂ ಬಸವರಾಜ ಹೆಳವರ (ಮೊ. 8970666424) ಅವರನ್ನು ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here