ಕಲಬುರಗಿ: ಜಿಲ್ಲೆಯ ಅಲೆಮಾರಿ ಹೆಳವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಖಿಲ ಕರ್ನಾಟಕ ಹೆಳವ ಸಮಾಜ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.
ಸಮಾಜದ ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ ಮಾತನಾಡಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದಂತ ಜಿಲ್ಲೆಯ ಅಲೆಮಾರಿ ಸಮುದಾಯದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಳವ ಸಮಾಜದ ವತಿಯಿಂದ ಅಭಿನಂದನೆಗಳನ್ನು ತಿಳಿಸುತ್ತಾ, 2020-21 ನೇ ಸಾಲಿನಲ್ಲಿ ನಡೆದ 10ನೇ ತರಗತಿಯಲ್ಲಿ ಶೇ. 75 ಹಾಗೂ ಪಿ.ಯು.ಸಿ ಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅಗಸ್ಟ್ 20ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದರು.
ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ (ಮೊ. 9901301254), ಸಾಯಬಣ್ಣ ಹೆಳವರ (ಮೊ. 9900836221) ಹಾಗೂ ಬಸವರಾಜ ಹೆಳವರ (ಮೊ. 8970666424) ಅವರನ್ನು ಸಂಪರ್ಕಿಸಬಹುದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…