ಆಳಂದ: ಪಟ್ಟಣದ ಪ್ರತಿಷ್ಠಿತ ಎಸ್‌ಆರ್‌ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಎಸ್‌ಆರ್‌ಜಿ ಆಂಗ್ಲ್ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆಂಗ್ಲ್ ಮಾಧ್ಯಮ ವಿಭಾಗದಲ್ಲಿ ಸಾನಿಕಾ ರಮೇಶ ಸಂಗಾ ಶೇ. ೯೭.೯೨ರಷ್ಟು ಅಂಕಗಳನ್ನು ಪಡೆಯುವುದರ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಪರೀಕ್ಷೆಗೆ ಕುಳಿತ ಶಾಲೆಯ ೩೬ವಿದ್ಯಾರ್ಥಿಗಳು ಡಿಸ್ಟಿಕ್ಷನ್‌ನಲ್ಲಿ ಪಾಸಾಗಿದ್ದು, ೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಗೆ ಪ್ರತಿಶತ ಫಲಿತಾಂಶ ಲಭ್ಯವಾಗಿದೆ. ಸತತ ೫ನೇ ವರ್ಷ ಶಾಲೆಗೆ ಪ್ರತಿಶತ ಫಲಿತಾಂಶ ಲಭ್ಯವಾಗುತ್ತಿದೆ. ಶಾಲೆಯ ರತ್ನದೀಪಾ ಬಸವರಾಜ ಪಾಟೀಲ ಶೇ. ೯೭.೭೬, ಸಂಧ್ಯಾ ಸಂಜಯಕುಮಾರ ಸಣ್ಮುಖ ಶೇ ೯೭.೪೪, ಸೃಷ್ಟಿ ಗುರುಲಿಂಗಪ್ಪ ಬಳಬಟ್ಟಿ ಶೇ. ೯೭.೧೨ ಅಂಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರೂ ಹಾಗೂ ಶಾಸಕರಾದ ಸುಭಾಷ್ ಆರ್ ಗುತ್ತೆದಾರ, ಸಂಸ್ಥೆಯ ಕಾರ್ಯದರ್ಶಿಗಳೂ ಹಾಗೂ ಜಿ.ಪಂ ಮಾಜಿ ಸದಸ್ಯರಾದ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಪ್ರಾಚಾರ್ಯೆ ಜ್ಯೋತಿ ವಿಶಾಖ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಉತ್ತಮ ಫಲಿತಾಂಶ ತೋರಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಸತತ ೫ನೇ ವರ್ಷ ಶಾಲೆಗೆ ಶೇ. ೧೦೦% ಫಲಿತಾಂಶ ಲಭ್ಯವಾಗುತ್ತಿದೆ ಇದಕ್ಕಾಗಿ ಶ್ರಮಿಸಿದ ಬೋಧಕ ವರ್ಗಕ್ಕೂ ಅಭಿನಂದನೆಗಳು.- ಸುಭಾಷ್ ಆರ್ ಗುತ್ತೇದಾರ, ಅಧ್ಯಕ್ಷರು ಎಸ್‌ಆರ್‌ಜಿ ಫೌಂಡೇಶನ್ ಶಾಸಕರು ಆಳಂದ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…