ಶಹಾಬಾದ:ತಾಲೂಕಿನ ವಿವಿಧ ಗ್ರಾಪಂಗಳ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸೋಮವಾರ ತಾಪಂ ಎದುರುಗಡೆ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಗ್ರಾಪಂಯ ೧೫ ನೇ ಹಣಕಾಸು ಯೋಜನೆಯಡಿ ೧೦% ಅನುದಾನದಲ್ಲಿ ಸಿಬ್ಬಂದಿಗಳ ವೇತನ ಪಾವತಿಸಬೇಕು. ತೊನಸನಹಳ್ಳಿ(ಎಸ್) ಗ್ರಾಪಂ ಕರ ವಸೂಲಿಗಾರರಾಗಿ ಸೇವೆ ಸಲ್ಲಿಸಿ ಗ್ರೇಡ-೨ ಕಾರ್ಯದರ್ಶಿಯಾಗಿ ಪದನ್ನೋತಿ ಹೊಂದಿದ ಪ್ರಯುಕ್ತ ಖಾಲಿಯಾಗಿರುವ ಕರ ವಸೂಲಿಗಾರ ಹುದ್ದೆಗೆ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಪಂಪ ಆಪರೇಟರ್‌ದಿಂದ ಬಿಲ್ ಕಲೆಕ್ಟರ್‌ಗೆ ಪದೋನ್ನತಿ ನೀಡಬೇಕು. ಗ್ರಾಪಂ ಸಿಬ್ಬಂದಿಗಳ ಅಕ್ರಮ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಿ ನೇಮಕಾತಿ ರದ್ದು ಪಡಿಸಬೇಕು.
ಪ್ರಸ್ತುತ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗಳ ದಾಖಲೆಗಳು ಸಂಬಂಧಿಸಿದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಂದ ಸಂಘಕ್ಕೆ ಸಲ್ಲಿಸಬೇಕು. ಎಲ್ಲಾ ಗ್ರಾಪಂಗಳಲ್ಲಿ ಸಿಬ್ಬಂದಿಗಳ ಸೇವಾ ಪುಸ್ತಕ ನಿರ್ವಹಣೆ ಮಾಡಬೇಕು. ಸಿಬ್ಬಂದಿಗಳ ಬಾಕಿ ಉಳಿದ ಜಿಪಂ ಅನುಮೋದನೆ ಶೀಘ್ರವೇ ಮಾಡಬೇಕು. ಸರ್ಕಾರಿ ಆದೇಶದಂತೆ ಕರ ವಸೂಲಿಯಲ್ಲಿ ೪೦% ಸಿಬ್ಬಂದಿ ವೇತನ ಪಾವತಿಸಬೇಕು. ಇಎಫ್‌ಎಮ್‌ಐ ಬಾಕಿ ಇರುವ ಸಿಬ್ಬಂದಿಗಳನ್ನು ಅನುಮೋದಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಹಲವಾರು ಬಾರಿ ತಿಳಿಸಿದರೂ ಬೇಡಿಕೆಗಳು ಈಡೇರಿಲ್ಲ.ಆದ್ದರಿಂದ ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು.ಇಲ್ಲದಿದ್ದರೇ ಉಗ್ರವಾದ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಂತರ ಒಂದು ದಿನದಲ್ಲಿ ಬೇಡಿಕೆ ಈಡೇರಿಸಬೇಕು.ಇಲ್ಲದಿದ್ದರೇ ಹೋರಾಟ ಮುಂದುವರೆಯುತ್ತದೆ ಎಂದು ತಾಪಂ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ.ಸಿ.ಹೊನಗುಂಟಾ, ಖಜಾಂಚಿ ಚಿತ್ರಶೇಖರ ದೇವರಮನಿ, ಸಿಐಟಿಯು ತಾಲೂಕಾಧ್ಯಕ್ಷ ಶೇಖಮ್ಮ ಕುರಿ, ಕೆಪಿಆರ್‌ಎಸ್ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…