ಸೇಡಂ: ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ರೈತರ ಬೆಳೆ ಹಾಳಾಗಿದ್ದು ರೈತರಿಗೆ ಪ್ರತಿ ಎಕರೆಗೆ 20 ಸಾವಿರ ವಿಶೇಷ ಪರಿಹಾರ ನೀಡಲು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸೇಡಂ ಮತಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳಗಾದ ಹೊಲಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ನಿರಂತರವಾಗಿ ಸುರಿದ ಅಪಾರ ಪ್ರಮಾಣದ ಮಳೆಯಿಂದಾಗಿ ಸೇಡಂ ಮತಕ್ಷೇತ್ರದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಮುಂಗಾರು ಬೆಳೆಗಳಾದ ತೊಗರಿ, ಉದ್ದು , ಸೋಯಾ, ಹೆಸರು, ತರಕಾರಿ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ.
ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ರೈತರು ಕಳೆದ ವರ್ಷವು ಇಂಥದ್ದೇ ಸಮಸ್ಯೆಗಳಿಂದ ರೈತರು ಕಂಗಾಲಾಗಿದ್ದಾರೆ. ನಷ್ಟದಲ್ಲಿರುವ ರೈತರಿಗೆ ಪರಿಹಾರ ತಲುಪಿಸುವಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದರು.
ಕೂಡಲೆ ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಮಿಕ್ಷೆಮಾಡಿ ರೈತರಿಗೆ ಪ್ರತಿ ಎಕರೆಗೆ 20 ಸಾವಿರ ವಿಶೇಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು