ಬಿಸಿ ಬಿಸಿ ಸುದ್ದಿ

ಆರೆಸ್ಸೆಸ್ ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮೀಸಲಾತಿ ಪರ ಹೇಳಿಕೆ: ಅಂಬಾರಾಯ ಅಷ್ಠಗಿ ಸ್ವಾಗತ

ಕಲಬುರಗಿ : ಅಸಮಾನತೆ ತೊಡೆದು ಹಾಕಲು ಮೀಸಲಾತಿ ಸಕಾರಾತ್ಮಕ ಕ್ರಮವಾಗಿದ್ದು, ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ಆರೆಸ್ಸೆಸ್ ಬೆಂಬಲಿಸಲಿದೆ ಎಂದು ಆರ್ ಎಸ್ ಎಸ್ ಸಂಘಟನೆಯ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯನ್ನು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ದಲಿತ ವಿರೋಧಿ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ನಿರಂತರವಾಗಿ ಅಪಪ್ರಚಾರ ಮಾಡುತ್ತಲೇ ಬರುತ್ತಿದ್ದು, ಹಲವು ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷವು “ದಲಿತರ ಅಭಿವೃದ್ಧಿ ಕೇವಲ ಘೋಷಣೆಯಲ್ಲೇ ಉಳಿಸಿತ್ತು”. ಆದರೆ ಬಿಜೆಪಿಯು ದಲಿತರ ಅಭಿವೃದ್ದಿಯತ್ತ ಕಾರ್ಯ ಪ್ರವೃತ್ತವಾಗಿದೆ.ಬಿಜೆಪಿ ಮತ್ತು ಆರೆಸ್ಸೆಸ್ ಯಾವತ್ತು ಸಹ ದಲಿತ ವಿರೋಧಿ ಆಗಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಆರೆಸ್ಸೆಸ್‍ನ ಹಿರಿಯರಾದ ದತ್ತಾತ್ರೇಯ ಹೊಸಬಾಳೆ ಅವರು ಮೀಸಲಾತಿ ಕುರಿತ ಸಂಘಟನೆಯ ನಿಲುವನ್ನು ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಪಕ್ಷ ಇದನ್ನು ಅರ್ಥ ಮಾಡಿಕೊಳ್ಳಬೇಕು.

ದೇಶದಲ್ಲಿನ ಪ್ರಚಲಿತ ಮೀಸಲು ವ್ಯವಸ್ಥೆಯನ್ನು ಬೆಂಬಲಿಸುವುದರ ಜೊತೆಗೆ ಸಾಮಾಜಿಕ ಸಾಮರಸ್ಯ, ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆ ಎಲ್ಲರಿಗೂ ಸಿಗುವಂತಾಗಬೇಕು ಇಲ್ಲವಾದಲ್ಲಿ ಒಕ್ಕೂಟ ವ್ಯವಸ್ಥೆಗೆ ಕೋಡಲಿ ಪೆಟ್ಟು ಬೀಳಲಿದ್ದು,”ದಲಿತರಿಲ್ಲದ ಭಾರತ ದೇಶದ ಇತಿಹಾಸ ಅಪೂರ್ಣ” ಎಂದು ಹೊಸಬಾಳೆ ಹೇಳಿರುವುದಕ್ಕೆ ಅಂಬಾರಾಯ ಅಷ್ಠಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು, ಬಿಜೆಪಿ ಹಾಗೂ ಸಂಘ- ಪರಿವಾರದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಲೇ ಬಂದಿರುವ ಸಂಗತಿ ಈಗ ದಲಿತ ಸಮುದಾಯಗಳಿಗೂ ಆರ್ಥವಾಗಿದೆ. ಈ ವಿಚಾರ ದಲಿತರೆಲ್ಲರಿಗೂ ಅರ್ಥವಾಗಿರುವುದರಿಂದ ಬಿಜೆಪಿ ಎಲ್ಲ ಕಡೆ ಸಬಲ- ಸದೃಢ ಪಕ್ಷವಾಗಿ ಹೊರಹೊಮ್ಮುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಫಲವಾಗುತ್ತಿದೆ ಎಂದೂ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.

ಭಾರತೀಯ ಜನತಾ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರೋಧಿ, ದಲಿತ ವಿರೋಧಿ, ಸಂವಿಧಾನ ವಿರೋಧಿ, ಮೀಸಲಾತಿ ವಿರೋಧಿ ಎಂಬ ಸುಳ್ಳು ಆರೋಪಗಳಿಗೆ ಸಮರ್ಪಕ ಉತ್ತರ ಈಗ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮಾತಿನಲ್ಲಲ್ಲ; ನಡತೆಯಲ್ಲೂ ಅದನ್ನು ತೋರಿಸಿಕೊಟ್ಟಿದ್ದಾರೆ. ಮೋದಿಯವರು, ಡಾ. ಅಂಬೇಡ್ಕರ್ ರವರ ಸಂವಿಧಾನದಿಂದಲೇ ತಾನು ಪ್ರಧಾನಿ ಆಗಿರುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿಯವರು ಈಚೆಗೆ ತಮ್ಮ ಸಚಿವ ಸಂಪುಟ ಪುನಾರಚನೆ ವೇಳೆ ಎಸ್‍ಸಿ ಸಮುದಾಯದ 12, ಎಸ್‍ಟಿ ಸಮುದಾಯದ 8, ಒಬಿಸಿ ಸಮುದಾಯಗಳ 27 ಜನರಿಗೆ ಅವಕಾಶ ನೀಡಿ ದಲಿತರು ಮತ್ತು ಹಿಂದುಳಿದ ವರ್ಗಗಳ ಬಗೆಗಿನ ತಮ್ಮ ನೈಜ ಕಾಳಜಿಯನ್ನು ಸಾಬೀತು ಪಡಿಸಿದ್ದಾರೆ. ಇತ್ತಿಚಿಗೆ ನಡೆದ 8 ರಾಜ್ಯಪಾಲರ ನೇಮಕಾತಿಯಲ್ಲೂ ದಲಿತ- ಶೋಷಿತ ಸಮುದಾಯಗಳಿಗೆ ಗರಿಷ್ಠ ಆದ್ಯತೆ ಕೊಟ್ಟಿದ್ದಾರೆ. ಈ ಕ್ರಮಗಳಿಂದ ದಲಿತ ಸಮುದಾಯಗಳು ಬಿಜೆಪಿಯ ಕಡೆಗೆ ವಾಲುತ್ತಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ದಲಿತರ ಅಭ್ಯುದಯಕ್ಕಾಗಿ ಅನುಷ್ಠಾನಕ್ಕೆ ತಂದಿರುವ ಯೋಜನೆಗಳ ಕಾರಣದಿಂದ ಈ ಸಮುದಾಯಗಳು ಭವಿಷ್ಯದ ದಿನಗಳಲ್ಲಿ ಬಿಜೆಪಿ ಪರವಾಗಿ ನಿಲ್ಲಲಿವೆ ಎಂಬ ವಿಶ್ವಾಸವನ್ನು ಅಂಬಾರಾಯ ಅಷ್ಠಗಿ ವ್ಯಕ್ತಪಡಿಸಿದ್ದಾರೆ.

emedialine

Recent Posts

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

3 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

10 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

14 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

17 mins ago

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

5 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

16 hours ago