ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಮಹಾದೇವಪ್ಪಾ ಸಾತಲಿಂಗಪ್ಪಗೆ ಸನ್ಮಾನ

0
20

ಕಲಬುರಗಿ: ಅಫಜಲಪುರ ತಾಲೂಕಿನ ಕೊಗನೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಕುಮಾರ ಮಹಾದೇವಪ್ಪಾ ಸಾತಲಿಂಗಪ್ಪ ಕುಂಬಾರ ಅವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳ ಪೈಕಿ 621 (ಶೇ. 99.36ರಷ್ಟು ) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ ಜಿ. ಸಂಗಾ ಅವರು ವಿದ್ಯಾರ್ಥಿ ವೈಯ್ಯಕ್ತಿಕವಾಗಿ 5,000 ರೂ ಗಳನ್ನು ಪೆÇ್ರೀತ್ಸಾಹ ಧನ ಬಹುಮಾನ ನೀಡಿ ಸನ್ಮಾನಿಸಿದರು.

ಅದೇ ರೀತಿ ಈ ಶಾಲೆಯಲ್ಲಿ ಕನ್ನಡ ಭಾμÁ ವಿಷಯದಲ್ಲಿ 34 ವಿದ್ಯಾರ್ಥಿಗಳು 125ಕ್ಕೆ 125 ಅಂಕಗಳನ್ನು ಪಡೆದಿದ್ದಕ್ಕಾಗಿ ಶಾಲೆಯ ಕನ್ನಡ ಶಿಕ್ಷಕ ಸತೀಶ ಜಮಾದಾರ ಅವರನ್ನು ಸಹ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಒಟ್ಟು 7 ವಸತಿ ಶಾಲೆಗಳ 334 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 260 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 74 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ರಮೇಶ ಸಂಗಾ ತಿಳಿಸಿದ್ದಾರೆ.

ರೇವಗ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಇಬ್ಬರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಳಮಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 47 ವಿದ್ಯಾರ್ಥಿಗಳ ಪೈಕಿ 45 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಇಬ್ಬರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಹೆಬ್ಬಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 50 ವಿದ್ಯಾರ್ಥಿಗಳು ಪೈಕಿ 40 ಡಿಸ್ಟಿಂಕ್ಷನ್ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕೋಗನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 49 ವಿದ್ಯಾರ್ಥಿಗಳ ಪೈಕಿ 38 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ತಡಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 44 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 49 ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 47 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಬಿಸಿಎಂ ಇಲಾಖೆಯ 7 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಉತ್ತಮ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಫಲಿತಾಂಶ ನೀಡಿದಕ್ಕಾಗಿ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಿಗೆ ಬಿಸಿಎಂ ಅಧಿಕಾರಿ ರಮೇಶ ಜಿ ಸಂಗಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ಶಿವರಾಮ ಚವ್ಹಾಣ, ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ಶಿವಪುತ್ರಪ್ಪ ಕಕ್ಕಳಮೇಲಿ, ನಾವೀದ್ ಅಂಜುಂ, ಅಣವೀರಪ್ಪ ಹರಸೂರ, ಮಲ್ಲಿಕಾರ್ಜುನ ಬಿರಾದಾರ, ಜ್ಯೋತಿ ಕರಕಳಿ, ಶ್ರೀನಾಥ ಕಣ್ಣಿ, ಶರಣಬಸಪ್ಪ ಮಾಗಶೆಟ್ಟಿ, ಮಲಕಪ್ಪ ಜಿ. ಬಿರಾದರ, ಪತ್ರಾಂಕಿತ ವ್ಯವಸ್ಥಾಪಕ ಸದಾಶಿವ ನಾರಾಯಣಕರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here