ಹೆಸರು ಬದಲಾವಣೆ ಮಾಡಿ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಪೀರಪಾಶಾ

0
155

ಶಹಾಬಾದ: ಭಾರತದ ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನಾ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದ್ದು ಇಬ್ಬರು ಗಣ್ಯಮಹನೀಯರುಗಳನ್ನು ಅಪಮಾನ ಮಾಡುವ ಸಲುವಾಗಿ ಬದಲಾವಣೆಯನ್ನು ಮಾಡಿ ಪ್ರಧಾನಿ ನರೇಂದ್ರ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ದೇಶಕ್ಕೆ ಅಪೂರ್ವ ಕೊಡುಗೆ ಮತ್ತು ದೇಶಕ್ಕಾಗಿ ಬಲಿದಾನ ಕೊಟ್ಟ ಮಾಜಿ ಪ್ರಧಾನಿ ರಾಜೀವ್ ಗಾಂಧಿರವರು ಸ್ಮರಣೀಯ ಮಹನೀಯರು. ಒಂದು ಪ್ರಶಸ್ತಿಗೆ ಇಟ್ಟ ಹೆಸರನ್ನು ಬದಲಾಯಿಸಿ, ಇನ್ನೊಬ್ಬ ಮಹನೀಯರ ಹೆಸರು ಇಡುವುದು ಇಬ್ಬರಿಗೂ ಅಪಮಾನ ಮಾಡಿದಂತೆ. ನರೇಂದ್ರ ಮೋದಿರವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.

Contact Your\'s Advertisement; 9902492681

ಗುಜರಾತ್ ನ ಮೊಟೇರಾ ಕ್ರಿಕೆಟ್ ಸ್ಟೇಡಿಯಂ ಅನ್ನು ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಎಂದು ಬದಲಾಯಿಸಿದ್ದು ಮೋದಿಯವರೇನು ಕ್ರಿಕೆಟ್ ಆಟಗಾರರೇ ಎಂಬ ಪ್ರಶ್ನೆ ದೇಶದ ಜನರಿಗೆ ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹೆಸರು ಬದಲಾವಣೆ ಮಾಡುವುದೇ ಜೀವನದ ಏಕೈಕ ಸಾಧನೆ ಎಂದುಕೊಂಡಿರುವ ಮೋದಿಯವರು ಇಂತಹ ಹುಸಿ ಪ್ರಚಾರ ತಂತ್ರಗಳನ್ನು ಬದಿಗೊತ್ತಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಆಹಾರ ಸಾಮಾಗ್ರಿಗಳ ಬೆಲೆಯನ್ನು ತಗ್ಗಿಸಿ ತಮ್ಮ ದೇಶಭಕ್ತಿಯನ್ನು ಸಾಬೀತುಪಡಿಸಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದರು.

ರಾಜೀವ ಗಾಂಧಿ ಖೆಲ್ ರತ್ನ ಬದಲಾಯಿಸುವುದು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವುದು ಮಾಡಿ ಮೋದಿ ದ್ವೇಷದ ರಾಜಕಾರಣ ಬಿತ್ತುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಶಾಶ್ವತವಲ್ಲ ನಾಳೆಯ ದಿನ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಕೂಡಾ ಈ ರೀತಿ ನಾಮಗಳ ಬದಲಾವಣೆಗಳಿಗೆ ಇಳಿದರೆ ಪ್ರಜಾಪ್ರಭುತ್ವದ ತತ್ವಗಳಿಗೆ ಮಾರPವಾಗುತ್ತದೆ. ಆದ್ದರಿಂದ ಹೆಸರು ಬದಲಾಯಿಸುವುದನ್ನು ಬಿಟ್ಟು ಕರೊನಾ ಮತ್ತು ಪ್ರವಾಹ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಗತಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here