ಸುರಪುರ: ತಾಲೂಕಿನ ದೇವಾಪುರ ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿದರು.ಅಲ್ಲದೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳಕ್ಕೆ ಸಿಇಒ ಶಿಲ್ಪಾ ಶರ್ಮಾ ಭೇಟಿ ನೀಡಿ ಕೊರೊನಾ ಲಸಿಕೆ ಕೊಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಲ್ಪಾ ಶರ್ಮಾ,18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.ಅಲ್ಲದೆ ತಾವೆಲ್ಲರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳಿ ಜೊತೆಗೆ ನಿಮ್ಮ ಕುಟುಂಬದ ಸದಸ್ಯರಿಗೂ ಲಸಿಕೆ ಪಡೆದುಕೊಳ್ಳಲು ತಿಳಿಸಿ.ಕೊರೊನಾ ಸೊಂಕು ಹರಡದಂತೆ ತಡೆಯಲು ಲಸಿಕೆ ಪಡೆಯುವುದು ತುಂಬಾ ಮುಖ್ಯವಾಗಿದೆ.
ಅಲ್ಲದೆ ಸರಕಾರ ಎಲ್ಲರಿಗೂ ಉಚಿತ ಲಸಿಕೆ ಪಡೆಯಲು ಅವಕಾಶ ನೀಡಿದೆ.ಆದ್ದರಿಂದ ಎಲ್ಲರು ಲಸಿಕೆಯನ್ನು ಪಡೆದುಕೊಳ್ಳಿ ಎಂದರು.ಜೊತೆಗೆ ಪ್ರತಿಯೊಬ್ಬರಿಗೂ ಕೆಲಸ ದೊರೆಯಲು ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಎಲ್ಲರು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಕೆಲಸ ಮಾಡುವಂತೆ ತಿಳಿಸಿದರು. ನಂತರ ಕೆಲಸದಲ್ಲಿ ನಿರತರಾಗಿದ್ದ ಇಪ್ಪತ್ತಕ್ಕೂ ಹೆಚ್ಚು ಜನ ಕೂಲಿಕಾರರಿಗೆ ಲಸಿಕೆ ಹಾಕಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ,ದೇವಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ಗುತ್ತೇದಾರ,ಸದಸ್ಯ ಬಲಭೀಮ ನಾಯಕ,ತಾಲೂಕು ಪಂಚಾಯತಿ ವ್ಯವಸ್ಥಾಪಕ ವೆಂಕೋಬ ಬಾಕ್ಲಿ, ಪಿಡಿಒ ಚಂದಪ್ಪ ನಾಯಕ (ಬಾಬು ದೊರೆ),ತಾಲೂಕು ಕೋಆರ್ಡಿನೇಟರ್ ವೆಂಕಟರಡ್ಡಿ,ಹುಸೇನಬಾಷ ತಿಂಥಣಿ ಹಾಗು ಅಂಗನವಾಡಿ ಮತ್ತು ಆಶಾ ಕಾಆರ್ಯಕರ್ತೆಯರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…