ಸಿಯುಕೆಯಲ್ಲಿ ಫಿಟ್ ಇಂಡಿಯಾ, ಸ್ವಾತಂತ್ರ್ಯದ ಓಟ 2.0

0
13

ಕಲಬುರಗಿ: ಫಿಟ್ ಇಂಡಿಯಾ, ಸ್ವಾತಂತ್ರ್ಯದ ಓಟ 2.0 ಅಭಿಯಾನದ ಅಂಗವಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಈ ಸುಂದರ ಕಾರ್ಯಕ್ರಮವನ್ನು ಆಯೋಜಿಸಿ ತನ್ನ ಎಲ್ಲಾ ಸಹೋದ್ಯೋಗಿಗಳನ್ನು ಒಟ್ಟುಗೂಡಿಸಿದೆ, ಇದರ ಒಂದು ಭಾಗವಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗುತ್ತಿದೆ.

ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವುದು ಮತ್ತು ದೈಹಿಕ ಚಟುವಟಿಕೆಯ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವುದು ಈ ಓಟದ ಮುಖ್ಯ ಧ್ಯೇಯವಾಗಿದೆ. ಮಾನಸಿಕ ಆರೋಗ್ಯ ಮತ್ತು ದೈಹಿಕ ಸಾಮಥ್ರ್ಯದ ನಡುವೆ ನಿಕಟ ಸಂಬಂಧವಿದೆ ಎಂದು ನಮಗೆಲ್ಲರಿಗೂ ತಿಳಿದಿದೆ.

Contact Your\'s Advertisement; 9902492681

ನಾವು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರಾ ಮಾನಸಿಕವಾಗಿಯೂ ನಾವು ಸದೃಢರಾಗಿರುತ್ತೇವೆ. ಈ ಸಂದರ್ಭದಲ್ಲಿ ನಾವು ದೈಹಿಕ ಸಾಮಥ್ರ್ಯದ ಜೊತೆಗೆ ಮಾನಸಿಕ ಸದೃಢತೆಯತ್ತ ಕೂಡಾ ಗಮನ ಹರಿಸಬೇಕು ಎಂದು ಆರ್ಥಿಕ ಅಧ್ಯಯನ ಮತ್ತು ಯೋಜನಾ ವಿಭಾಗದ ಮುಖ್ಯಸ್ಥರಾದ ಪೆÇ್ರ. ಪುμÁ್ಪ ಎಂ ಸವದತ್ತಿ ಅಭಿಪ್ರಾಯಪಟ್ಟರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗ ಆಯೋಜಿಸಿದ್ದ ಫಿಟ್ ಇಂಡಿಯಾ, ಸ್ವಾತಂತ್ರ್ಯದ ಓಟ 2.0 ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು

ಈ ಸಂದರ್ಭದಲ್ಲಿ ಮಾತನಾಡುತ್ತಾ. ಸಿಯುಕೆಯ ಕುಲಸಚಿವರಾದ ಪೆÇ್ರ.ಬಸವರಾಜ ಪಿ ಡೋಣೂರ ಅವರು, ತಮ್ಮ ನಾಗರಿಕರನ್ನು ದೈಹಿಕವಾಗಿ ಸದೃಢರಾಗಿರಿಸಲು ಈ ಉಪಯುಕ್ತವಾದ ಕ್ರಮವನ್ನು ಕೈಗೊಂಡಿದ್ದಕ್ಕಾಗಿ ನಾನು ಭಾರತ ಸರಕಾರಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.

ಡೀನ್‍ಗಳು, ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗು ಭೋದಕೇತರ ಸಿಬ್ಬಂಧಿಗಳು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here