ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಅರ್ಜಿ ಆಹ್ವಾನ

0
133

ಕಲಬುರಗಿ: ಪ್ರಸಕ್ತ 2021-22ನೇ ಸಾಲಿಗೆ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ದುಡಿಮೆ ಬಂಡವಾಳ ಸಾಲ ಒದಗಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಪಡೆಯಲು ಉದ್ದೇಶಿಸಿರುವ ಕೈಮಗ್ಗ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರಸಕ್ತ ಸಾಲಿಗೆ ಈ ಯೋಜನೆಯಡಿ ಜಿಲ್ಲೆಯ 10 ಕೈಮಗ್ಗ ನೇಕಾರರಿಗೆ ಬ್ಯಾಂಕ್‍ಗಳಿಂದ ಸಾಲ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಶೇ. 6ರ ಬಡ್ಡಿ ದರದಲ್ಲಿ ಕೈಮಗ್ಗ ನೇಕಾರರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಸಾಲವನ್ನು ಒದಗಿಸಲಾಗುತ್ತದೆ. ಬ್ಯಾಂಕ್‍ನವರು ವಿಧಿಸುವ ಸಾಲದ ಮೇಲಿನ ಗರಿಷ್ಠ ಬಡ್ಡಿ ದರ ಶೇ. 7 ರಂತೆ ಸಾಲ ಮಂಜೂರಾದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರವು ಬಡ್ಡಿ ಸಹಾಯಧನವಾಗಿ ನೀಡಲಿದೆ.

Contact Your\'s Advertisement; 9902492681

ಸಾಲದ ಮೊಬಲಗಿನ ಶೇ. 20 ಗರಿಷ್ಠ 10,000 ರೂ. ಗಳನ್ನು ಮಾರ್ಜಿನ್ ಮನಿಯಾಗಿ ಸಾಲದ ಖಾತೆಗೆ ಜಮಾ ಮಾಡಲಾಗುವುದು. ನೇಕಾರರ ಕೈಮಗ್ಗ ನೇಕಾರಿಕೆ ವ್ಯವಹಾರವನ್ನು ಆಧರಿಸಿ ಈ ಯೋಜನೆಯಡಿ ಗರಿಷ್ಠ 5,00,000 ರೂ.ಗಳ ಸಾಲವನ್ನು ಒದಗಿಸಲಾಗುತ್ತದೆ.

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಪಡೆಯಲು ಉದ್ದೇಶಿಸಿರುವ ಕೈಮಗ್ಗ ನೇಕಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಕಲಬುರಗಿ, ಗುರು ಬಸವ ಕಟ್ಟಡ, ಮನೆ ನಂ.2-910, ಓಕಳಿ ಕ್ಯಾಂಪ್, ಸೌಭಾಗ್ಯ ಕಲ್ಯಾಣ ಮಂಟಪ ಹತ್ತಿರ, ಸೇಡಂ ರಸ್ತೆ, ಕಲಬುರಗಿ-585102 ಕಚೇರಿಗೆ 2021ರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08472-278629 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here