ಕಲಬುರಗಿ: ಮಕ್ಕಳಲ್ಲಿ ಮಾತೃ ಭಾಷಾಭಿಮಾನ ಹೆಚ್ಚಿಸಲು ಹತ್ತನೇ ತರಗತಿಯ ಕನ್ನಡ ವಿಷಯದಲ್ಲಿ 100 ಪ್ರತಿಶತ ಅಂಕಗಳು ಗಳಿಸಿದ ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳನ್ನು ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ‘ಹತ್ತರ ಕನ್ನಡಕೆ… ಗುಣಾಗ್ರಣಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕನ್ನಡ ಜೇನಿಗಿಂತ ಸಿಹಿಯಾದ ಭಾಷೆಯಾಗಿದೆ. ಆದರೆ, ಆಂಗ್ಲ ಭಾಷೆಯ ವ್ಯಾಮೋಹದಿಂದ ಇಂದು ಕನ್ನಡಕ್ಕೆ ಕುತ್ತು ಬಂದಿದೆ. ಅವಶ್ಯಕತೆಗೆ ಬೇಕಾದಷ್ಟು ಮಾತ್ರ ಅನ್ಯ ಭಾಷೆಯನ್ನು ಕಲಿಯಬೇಕು. ಅಲ್ಲದೇ’ ಮಾತೃ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಜೀವನಕ್ಕೆ ಉಸಿರು ಎಷ್ಟು ಮುಖ್ಯವೋ ಹಾಗೆಯೇ ಕನ್ನಡವನ್ನು ನಮ್ಮ ಉಸಿರಾಗಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಘಟಕ ವಿಜಯಕುಮಾರ ತೇಗಲತಿಪ್ಪಿ-ಮೊ.98803 49025 ಗೆ ಸಂಪರ್ಕಿಸಲು ಅವರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…