ಜೇವರ್ಗಿ: ಇಲ್ಲಿನ ಪ್ರಗತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೇವರ್ಗಿ ತಾಲೂಕಿನ ಕಲ್ಯಾಣ ಕರ್ನಾಟಕ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಸಭೆಯನ್ನು ತಾಲೂಕು ಅಧ್ಯಕ್ಷರಾದ ಇಬ್ರಾಹಿಂ ಪಟೇಲ್ ಅವರ ನೇತೃತ್ವದಲ್ಲಿ ಕರೆಯಲಾಗಿತ್ತು.
ಈ ಸಭೆಯಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸರಕಾರವು ತೆಗೆದುಕೊಳ್ಳುತ್ತಿರುವ ನಿರ್ಣಯಗಳ ಕುರಿತು ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಬಲಿಷ್ಠ ಮಾಡುವ ಮೂಲಕ ಸಂಘಟಿತ ಹೋರಾಟಕ್ಕೆ ಮುಂದಾಗಲು ನಿರ್ಣಯ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸದಸ್ಯರು ಪುಂಡಲಿಕ ಗಾಯಕ್ವಾಡ್, ಭಾಷಾ ಪಟೇಲ್ ಯಾಳವಾರ್, ನಿಂಗಣ್ಣ ಮಯೂರ, ಸೇರಿದಂತೆ ಇತರ ಸದಸ್ಯರು ಭಾಗವಹಿಸಿದ್ದರು.