ಬೆಂಗಳೂರು: ಪೂರ್ವ ತಾಲ್ಲೂಕು ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯ ಹೂಡಿ ವಾರ್ಡ್ ನ ಕೊಡಿಗೇಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸರಕಾರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ಹೆಚ್ ವೆಂಕಟೇಶ್ ಅವರು ಸತತ 84 ನೇ ಬಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕೋವಿಡ್ ನಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಸರಕಾರಿ ಶಾಲೆಗಳು ಮುಚ್ಚಿವೆ. ಇದರಿಂದ ಬಡ ಮಕ್ಕಳು ಶಾಲೆಯಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಅಲ್ಲದೆ, ಬಹುತೇಕ ಮಕ್ಕಳು ಬಾಲ್ಯ ಕಾರ್ಮಿಕರಾಗಿ ಹಾಗೂ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹಗಳು ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಷಯ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ 2 ವರ್ಷಗಳ ನಂತರವಾದರೂ ಸ್ಪಷ್ಟ ನಿಲುವನ್ನು ತಗೆದುಕೊಳ್ಳುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತಹ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಬಾಯಿ ಕೊಡಿಗೇಹಳ್ಳಿ ಹಾಗೂ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ವರದರಾಜು, ಪ್ರತಾಪ್ ಸಿಂಗ್, ಮಹಬೂಬ್ ಪಾಷಾ, ಪ್ರಶಾಂತ್ ಕುಮಾರ್ ಹಾಗೂ ಎಸ್ ಡಿಎಂಸಿ ಸದಸ್ಯರು ಮತ್ತು ವಕೀಲರಾದ ಪ್ರಭಾಕರ್ ಮತ್ತು ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ವಿ ವಿವೇಕ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…