ಕಲಬುರಗಿ; 75ನೇ ಸ್ವಾತಂತ್ರೋತ್ಸವದ ಅಂಗವಾಗಿ ರಾಷ್ಟ್ರ ಮಟ್ಟದ ಶ್ರೇಷ್ಟ ಕೃಷಿ ವಿಜ್ಞಾನ ಕೇಂದ್ರ ಪ್ರಶಸ್ತಿ ಪುರಸ್ಕøತ ಕಲಬುರಗಿಯ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಆವರಣಕ್ಕೆ ಭೇಟಿ ನೀಡಿದ ಬೃಹತ ಕೈಗಾರಿಕಾ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿಯವರು ಭೇಟಿ ನೀಡಿ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿ ಮತ್ತು ಸಿಬ್ಬಂದಿಯನ್ನು ಜಿಲ್ಲಾಡಳಿತದ ಪರವಾಗಿ ಗೌರವಿಸಿ ಅಭಿನಂದಿಸಿದರು.
ವಿಜ್ಞಾನಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತ ಕಲಬುರಗಿ ವಿಷನ್-2050ರ ಅಂಗವಾಗಿ ಕೃಷಿ ಕ್ಷೇತ್ರವನ್ನು ಲಾಭದಾಯಕವನ್ನಾಗಿಸಲು ಕಾರ್ಯಕ್ರಮದ ರೂಪುರೇಶಗಳನ್ನು ಸಿದ್ದಪಡಿಸಲು ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ಜಿಲ್ಲೆಯ ಪ್ರಗತಿಪರ ರೈತರು, ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಇಲಾಖೆಯ ಸಲಹೆ ಸೂಚನೆಗಳನ್ನು ಪಡೆಯುವ ಮೂಲಕ ಈ ಭಾಗದ ಕೃಷಿ ಕ್ಷೇತ್ರದ ಅಭಿವೃಧ್ದಿಗಾಗಿ ಒಗ್ಗಟ್ಟಾಗಿ ಕೆಲಸ ಮಾಡಲು ಸಲಹೆ ನೀಡಿದರು. ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿರವರು ಕೇಂದ್ರದ ಚಟುವಟಿಕೆಗಳು ಹಾಗೂ ಪ್ರಾತ್ಯಕ್ಷತೆಗಳನ್ನುÀ ವಿವರಿಸಿದರು.
ಸಚಿವರು ವಲಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ 75 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಪ್ರಾಯೋಗಿಕವಾಗಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ. ನಮೋಶಿ, ಸೇಡಂ ಶಾಸಕರಾದ ರಾಜಕುಮಾರ ತೆಲ್ಕೂರ,ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟz Àಅನೇಕ ಅಧಿಕಾರಿಗಳು,ಸಹ ಸಂಶೋಧನಾ ನಿರ್ದೇಶಕರಾದ ಡಾ. ಎಂ.ಎಂ. ಧನೋಜಿ, ಹಿರಿಯ ಕ್ಷೇತ್ರ ವ್ಯವಸ್ಥಾಪಕರು, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರತೀಂದ್ರನಾಥ ಸೂಗೂರು, ಕೃಷಿ ಉಪ ನಿರ್ದೇಶಕರಾದ ಅನುಸೂಯ ಹೂಗಾರ,ಆವರಣದ ಕೃಷಿ ವಿಜ್ಞಾನಿಗಳು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ಶಿಕ್ಷಕರ ಸಂಘದ ಅಧ್ಯಕ್ಷರಾದ ಡಾ. ಆನಂದ ನಾಯಕ ಸ್ವಾಗತಿಸಿ ವಂದಿಸಿದರು.
ಸಚಿವರು ವಲಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ 75 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಪ್ರಾಯೋಗಿಕವಾಗಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.