ಸುರಪುರ: ಅನೇಕ ಮಹನಿಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಎಲ್ಲರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿದರು.
ನಗರಸಭೆ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ,ಇಂದಿನ ಅನೇಕರಿಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನಿಯರ ಬಗ್ಗೆ ಗೊತ್ತಿಲ್ಲ ಆದ್ದರಿಂದ ಸ್ವಾತಂತ್ರ್ಯ ದಿನದ ಮಹತ್ವವನ್ನು ಎಲ್ಲರು ಅರಿತುಕೊಳ್ಳಬೇಕು ಎಂದರು.ಅಲ್ಲದೆ ಜವಾಹಾರಲಾಲ ನೆಹರು ಅವರಾಗಲಿ,ಇಂದಿರಾಗಾಂಧಿಯವರಾಗಲಿ ಮತ್ತು ಅಟಲ್ ಬಿಹಾರಿ ವಾಜಪೇಯಿಯವರಾಗಲಿ ಅವರೆಲ್ಲ ದೇಶಕಂಡ ಮಹನಿಯರು ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಯಾವ ರಾಜಕಾರಣಿಗೂ ಶೋಭೀಸುವುದಿಲ್ಲ.ಆದರೆ ಕೆಲವರು ಇವರ ಬಗ್ಗೆ ಮಾತನಾಡುವುದಕ್ಕೆ ನಾನು ವಿರೋಧಿಸುವುದಾಗಿ ತಿಳಿಸಿದರು.ಎಲ್ಲರು ದೇಶಪ್ರೇಮವನ್ನು ದೇಶಕಂಡ ಮಹಾನ್ ವ್ಯಕ್ತಿಗಳ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಬೆಳೆಸಿಕೊಳ್ಳೋಣ ಎಂದರು.ಹಾಗು ಶೀಘ್ರದಲ್ಲಿಯೆ ಸುರಪುರ ನಗರಕ್ಕೆ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಸೇರಿದಂತೆ ಎಲ್ಲಾ ಸದಸ್ಯರು ಮತ್ತು ಅನೇಕ ಮುಖಂಡರು ಹಾಗು ನಗರಸಭೆ ಸಿಬ್ಬಂದಿಗಳು ಭಾಗವಹಿಸಿದ್ದರು.
ತಹಸೀಲ್ ಕಚೇರಿ ಆವರಣ: ನಗರದ ತಹಸೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಧ್ವಜಾರೋಹಣ ನೆರವೇರಿಸಿದರು.
ಶಾಸಕ ರಾಜುಗೌಡ,ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ,ಗ್ರೇಡ-2 ತಹಸೀಲ್ದಾರ್ ಸೂಫಿಯಾ ಸುಲ್ತಾನ,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಡಿವೈಎಸ್ಪಿ ವೆಂಕಟೇಶ ಉಗಿಬಂಡಿ,ತಾ.ಪಂ ಇಒ ಅಂಬ್ರೇಶ,ಬಿಇಒ ಮಹಾದೇವರಡ್ಡಿ,ಅಕ್ಷರದಾಸೋಹದ ಎಡಿ ಮೌನೇಶ ಕಂಬಾರ,ಪಿಐ ಸುನೀಲಕುಮಾರ ಮೂಲಿಮನಿ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.
ಮಹಾತ್ಮ ಗಾಂಧಿ ವೃತ್ತ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಗರಸಭೆಯಿಂದ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ, ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಸದಸ್ಯರಾದ ವೇಣುಮಾಧವ ನಾಯಕ,ಎಪಿಎಮ್‍ಸಿ ಅಧ್ಯಕ್ಷ ದುರ್ಗಪ್ಪ ಗೋಗಿಕೆರಿ,ನಗರಸಭೆ ಅನೇಕ ಸದಸ್ಯರು ಮತ್ತು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹಾಗು ಶ್ರೀ ಜನನಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರು ಆಜಾದಿ ಅಮೃತ ಮಹೋತ್ಸವ ಮೆರವಣಿಗೆ ನಡೆಸಿ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಡಾ:ಬಿ.ಆರ್.ಅಂಬೇಡ್ಕರ ವೃತ್ತ: ನಗರದ ಬಸ್ ನಿಲ್ದಾಣದ ಬಳಿಯ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯಲ್ಲಿ ನಗರಸಭೆಯಿಂದ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.ಶಾಸಕ ರಾಜುಗೌಡ ಹಾಗು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಅಂಬೇಡ್ಕರ್‍ರ ಮೂರ್ತಿಗೆ ಬೃಹತ್ ಗಾತ್ರದ ಮಾಲಾರ್ಪಣೆ ಮಾಡಿ ವಂದಿಸಿದರು.ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್, ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಸೇರಿದಂತೆ ಎಲ್ಲಾ ಸದಸ್ಯರು ಹಾಗು ಸಿಬ್ಬಂದಿಗಳಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…