ಬೀದರ : ಮಂಗಳವಾರ ಕಲ್ಯಾಣ ಕರ್ನಾಟಕ ಪ್ರದೇಶ ಮತ್ತು ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕುರಿತು ವಿಚಾರ ಸಂಕಿರಣವನ್ನು ಬೀದರ ನಗರದ ಮೈಲೂರು ವೃತ್ತದ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಿಯೋಜಿಸಲಾಗಿದೆ.
ವಿಚಾರ ಸಂಕಿರಣಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಬಂಡೆಪ್ಪ ಕಾಶೆಂಪೂರ್, ರಹೀಂ ಖಾನ್, ಚನ್ನಬಸಪ್ಪ ಹಾಲಹಳ್ಳಿ, ಅಬ್ದುಲ ಖದೀರ್, ದೇವಿಂದ್ರ ಕಮಲ್, ಡಾ. ಆನಂದರಾವ್ ಭಾಗವಹಿಸುತ್ತಿದ್ದಾರೆ. ವಿಚಾರ ಸಂಕಿರಣದ ಉದ್ಘಾಟನೆಯನ್ನು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ, ಲಕ್ಷ್ಮಣ ದಸ್ತಿಯವರು ನೆರವೇರಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಬೀದರ ಜಿಲ್ಲಾ ಘಟಕದ ಅಧ್ಯಕ್ಷರಾದ ಅನಂತರೆಡ್ಡಿ ನರಸಾರೆಡ್ಡಿರವರು ವಹಿಸಲಿದ್ದಾರೆ.
ಈ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ವಿಶೆಷ ಆಹ್ವಾನಿತರಾಗಿ, ಮನೀಷ್ ಜಾಜು, ಡಾ. ಮಾಜಿದ ದಾಗಿ, ಇಸ್ಮಾಯಿಲ ಉಲ್ಲಾ ಸಾಹಬ್, ಲಿಂಗರಾಜ ಸಿರಗಾಪೂರ, ಡಾ. ಎ.ಎಸ್. ಭದ್ರಶೆಟ್ಟಿ, ಶಿವಲಿಂಗಪ್ಪ ಬಂಡಕ್, ಮೊ.ಮಿರಾಜೋದ್ದೀನ್, ಜ್ಞಾನಮಿತ್ರ ಸ್ಯಾಮ್ಯೂವೆಲ್ ಭಾಗವಹಿಸಲಿದ್ದಾರೆ.
ಈ ಮಹತ್ವದ ವಿಷಯದ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಬೀದರ ಜಿಲ್ಲೆಯ ಬುದ್ಧಿ ಜೀವಿಗಳು, ಚಿಂತಕರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಪರ ಸಾಮಾಜಿಕ ಕಾರ್ಯಕರ್ತರು, ಎಲ್ಲಾ ಕ್ಷೇತ್ರದ ಗಣ್ಯರು ಹಾಗೂ ಸಮಿತಿಯ ಎಲ್ಲಾ ಕ್ರೀಯಾ ಸದಸ್ಯರು ಭಾಗವಹಿಸಬೇಕೆಂದು ಸಮಿತಿಯ ವಕ್ತಾರರಾದ ರೋಹನಕುಮಾರ ರವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…