ಕಲಬುರಗಿ: ನನಗೆ ಅಖಿಲ ಭಾರತ ವೀರಶೈವ ಮಹಾಸಭೆಯಿಂದ ಉಚ್ಛಾಟಿಸುವ ಬೆದರಿಕೆ ಹಾಕಿರುವ ಅಖಿಲ ಭಾರತ ವೀರಶೈವ ಮಹಾಸಭೆಯ ಯುವ ಘಟಕದ ಜಿಲ್ಲಾಧ್ಯಕ್ಷ ಸುರೇಶ್ ಜೋಗೂರ್ ಅವರು ಮಹಾಸಭೆಯ ಸದಸ್ಯತ್ವವನ್ನೇ ಪಡೆದಿಲ್ಲ ಎಂದು ಮಹಾಸಭೆಯ ಸದಸ್ಯ ಎಂ.ಎಸ್. ಪಾಟೀಲ್ ನರಿಬೋಳ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುರೇಶ್ ಜೋಗೂರ್ ಅವರು ನನಗೆ ಉಚ್ಛಾಟನೆ ಮಾಡುವ ಕುರಿತು ಹೇಳಿಕೆ ನೀಡಿದ್ದು, ಆ ಕುರಿತು ಮಹಾಸಭೆಯ ಕೇಂದ್ರ ಸಮಿತಿಯವರಿಗೆ ಕೇಳಿದಾಗ, ಜೋಗೂರ್ ಅವರು ಮಹಾಸಭೆಯ ಸದಸ್ಯತ್ವವನ್ನೇ ಪಡೆದಿಲ್ಲ ಎಂಬ ಮಾಹಿತಿ ಸಿಕ್ಕಿದೆ ಎಂದು ತೀವ್ರ ಆಶ್ಚರ್ಯ ವ್ಯಕ್ತಪಡಿಸಿದರು.
ಮಹಾಸಭೆಯ ಸದಸ್ಯರಲ್ಲದವರನ್ನು ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರ ಹಿಂದೆಯೂ ಸಹ ಸಾಕಷ್ಟು ಅನುಮಾನಗಳಿವೆ ಎಂದು ಹೇಳಿದ ಅವರು, ಜಿಲ್ಲಾ ಘಟಕದ ಪದಾಧಿಕಾರಿಗಳ ಅವಧಿ ಮುಗಿದರೂ ಸಹ ಅರುಣಕುಮಾರ್ ಪಾಟೀಲ್ ಕೊಡಲಹಂಗರಗಾ ಹಾಗೂ ಡಾ. ಶ್ರೀಶೈಲ್ ಘೂಳಿ ಅವರು ಮಹಾಸಭೆಯ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಯಬೇಕು ಎಂಬ ನನ್ನ ಆಗ್ರಹಕ್ಕೆ ನಾನು ಬದ್ಧ ಇರುವೆ. ಇಲ್ಲವಾದಲ್ಲಿ ಹೋರಾಟವನ್ನು ಕೈಗೊಳ್ಳುವೆ ಎಂದು ಅವರು ಪುನರುಚ್ಛರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…