ಕುಂದಾಪುರ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಹಾಗೂ ಇದರ ವಿರುಧ್ದ ಇಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ಮಾರ್ಚ್ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರ ಸಹಿತ ವಿದ್ಯಾರ್ಥಿಗಳ ಬಂಧನವಾಗಿದ್ದು, ತಕ್ಷಣ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿಯ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಮುಖಂಡರಾದ ನವಾಜ್ ಶೇಕ್ ಮಾತನಾಡಿ ಹೊಸ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಚರ್ಚೆ ನಡೆಸದೆ, ತಾರಾತುರಿಯಲ್ಲಿ ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಸರಕಾರವು ಹೊರಟಿದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಂಪೂರ್ಣವಾಗಿ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸುವ ಮತ್ತು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ ಆದ್ದರಿಂದ ಈ ಅಸಮರ್ಪಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಝೆಶನ್ ,ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…