ಸುರಪುರ: ತಾಲೂಕಿನ ಕೋನಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಸಿಸಿ ರಸ್ತೆ ಸೇರಿದಂತೆ ವಿವಿಧ ಅಭೀವೃಧ್ಧಿ ಕಾಮಗಾರಿಗಳಿಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಗುದ್ದಲಿ ಪೂಜೆ ನೆರವೇರಿಸಿದರು.
ಕೋನಾಳ ಗ್ರಾಮದಲ್ಲಿ ಸೋಮವಾರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಲಜೀವನ ಮೀಷನಡಿಯಲ್ಲಿ ನಾಗರಾಳ,ದೇವತ್ಕಲ್, ಹಾಲಬಾವಿ, ಚನ್ನಪಟ್ಟಣದಲ್ಲಿ ಸುಮಾರು 2 ಕೋಟಿಗೂ ಅಧಿಕ ವೆಚ್ಚದಲ್ಲಿ ಕುಡಿಯುವ ನೀರನ್ನು ಒದಿಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಅದೇರಿತಿಯಾಗಿ ಕೆಕೆಆರ್‍ಡಿಬಿ ಅನುದಾನದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಶಾಲಾ ಕೋಠಡಿ, ಸಿಸಿರಸ್ತೆ, ಒಳಚರಂಡಿಗಳು ಮತ್ತು ಯಾತ್ರಿ ನಿವಾಸಗಳ ಕಾಮಗಾರಿಗಳ ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಕಾಮಗಾರಿಗಳ ಗುತ್ತಿಗೆಪಡೆದವರು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಬೇಕು,ಜೊತೆಗೆ ಅಧಿಕಾರಿಗಳು ಕಾಮಗಾರಿಗಳನ್ನು ನಿಗಾವಹಿಸಿ ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ(ತಾತಾ), ಯಲ್ಲಪ್ಪ ಕುರುಕುಂದಿ ಜಿಪಂ ಸದಸ್ಯ ಬಸವರಾಜ ಸ್ಥಾವರ ಮಠ, ಮುಖಂಡರಾದ ಹಚ್.ಸಿ.ಪಾಟೀಲ, ಸಿದ್ದನಗೌಡ ಕರಿಬಾವಿ, ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮೇಲಪ್ಪ ಗುಳಗಿ, ಶಾಂತಗೌಡ ಚನ್ನಪಟಣ ಲೊಕೋಪಯೋಗಿ ಎಈಈ ಎಸ್.ಜಿ.ಪಾಟೀಲ್, ಗ್ರಾಮೀಣ ನೀರು ಸರಬರಾಜು ನಿಗಮದ ಎಈಈ ಹಣಮಂತಪ್ಪ ಅಂಬ್ಲಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…