ನಾಲವಾರ: ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಾಲವಾರ ಮಠ ಮತ್ತು ಪೂಜ್ಯ ಶ್ರೀಗಳ ಪ್ರೇರಣೆಯಿಂದ ಉನ್ನತವಾದ ಜವಾಬ್ದಾರಿ ಲಭಿಸಿದೆ ಎಂದು ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ಹೇಳಿದರು.
ಚಿತ್ತಾಪುರ ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಬುಧವಾರ ಬೆಳಿಗ್ಗೆ ಆಯೋಜಿಸಿದ್ದ ಡಾ.ಸಿದ್ದತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ವಿರಚಿತ `ವಚನೋಲ್ಲಾಸ’ ಎಂಬ ಆಧುನಿಕ ವಚನಗಳ ಸಂಪುಟವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಶ್ರೀಗಳ ಆಶೀರ್ವಾದ ನಿರಂತರವಾಗಿರಲಿಎಂದು ಆಶಯ ವ್ಯಕ್ತಪಡಿಸಿ, ಸರಕಾರದ ನೂತನ ಸಚಿವರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಶ್ರೀಮಠಕ್ಕೆ ಬಂದಿರುವುದಾಗಿ ಮನತುಂಬಿ ಹೇಳಿದರು.
ಆಶೀರ್ವಚನ ನೀಡಿದ ಪೂಜ್ಯ ಡಾ.ಸಿದ್ದತೊಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಮಠದೊಂದಿಗೆ ಅವಿನಾಭಾವ ಸಂಬಂಮಧವಿರುವ ಭಗವಂತ ಖೂಬಾ ಅವರು ಶ್ರದ್ಧೆ ಮತ್ತು ನಂಬಿಕೆಯ ಬದ್ಧತೆಯ ನಾಯಕರಾಗಿದ್ದಾರೆ. ಮೊದಲ ಬಾರಿಗೆ ಶ್ರೀಮಠಕ್ಕೆ ಆಗಮಿಸಿದ್ದು, ಅವರು ವಚನ ಸಂಪುಟ `ವಚನೋಲ್ಲಾಸ’ವನ್ನು ಬಿಡುಗಡೆ ಮಾಡಿದ್ದು ಸಂತಸವಾಯಿತು ಎಂದು ಹೇಳಿದರು.
ಸಂಸ್ಕಾರವಂತರು ಕೇಂದ್ರ ಸಚಿವರಾಗಿ ನೇಮಕಗೊಂಡಿದ್ದನ್ನು ಶ್ಲಾಘಿಸಿದ ಶ್ರೀಗಳು, ಸತ್ಕಾರ್ಯವನ್ನು ಮಾಡುವ ನಿಟ್ಟಿನಲ್ಲಿ ಇನ್ನಷ್ಟು ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ ಅವರಿಗೆ `ಗುರುರಕ್ಷೆ’ ನೀಡಿ, ಮೈಸೂರು ಪೇಟ ತೊಡಿಸಿ, ಶಾಲು, ಫಲಪುಷ್ಪಗಳೊಂದಿಗೆ ಶ್ರೀಗಳು ಸನ್ಮಾನ ಮಾಡಿ ಗೌರವಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸೇಡಂನ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅಧ್ಯಕ್ಷತೆ ವಹಿಸಿದ್ದರು.
ಶಾಸಕರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಬಿಜೆಪಿ ಕಲಬುರಗಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಯಾದಗಿರಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಪಾಟೀಲ ನಾಯ್ಕಲ್, ತೊಗರಿ ಬೋರ್ಡ್ ಅಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಸುರೇಶ ಸಜ್ಜನ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಆಳಂದ ಬಿಜೆಪಿ ಮುಖಂಡ ಸಂಜಯ ಮಿಸ್ಕಿನ್ ಇತರರು ಮುಖ್ಯ ಅತಿಥಿಗಳಾಗಿದ್ದರು.
ವಚನ ಸಂಪುಟವಾದ `ವಚನೋಲ್ಲಾಸ’ ಗ್ರಂಥದ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಪರಿಚಯ ಮಾತನಾಡಿದರು.
ಶ್ರೀಮಠದ ಶ್ರೀ ಕೋರಿಸಿದ್ದೇಶ್ವರ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಕೇಂದ್ರ ಸಚಿವರು, ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…