ಶಹಾಬಾದ: ಕೇಂದ್ರದ ಬಿಜೆಪಿ ಸರ್ಕಾರ ಜನಪರವಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅದನ್ನು ಜನಸಾಮನ್ಯರಿಗೆ ತಿಳಿಸುವ ಕೆಲಸ ಬಿಜೆಪಿ ಕಾರ್ಯಕರ್ತರಿಂದಾಗಬೇಕೆಂದು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಅವರು ನಗರದ ಶಹಾಬಾದ –ವಾಡಿ ವೃತ್ತದಲ್ಲಿ ಜನಾಶೀರ್ವಾದ ಯಾತ್ರೆಯ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಮಂಡಲ ವತಿಯಿಂದ ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದರು.
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಯುವಕರು ಹಾಗೂ ಉತ್ಸಾಹಿಗಳಾಗಿದ್ದು, ಮತಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ.ಅವರ ಅಭಿವೃದ್ಧಿ ಕಾರ್ಯಗಳಿಗೆ ನಮ್ಮಿಂದಾಗುವ ಎಲ್ಲಾ ಸಹಕಾರವನ್ನು ನೀಡಲು ಸಿದ್ಧ ಎಂದು ಹೇಳಿದರು.
ಶಾಸಕರಾದÀ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಸೇಡಂ ಶಾಸಕ ರಾಜಕುಮಾರ ಪಾಟೀಲ ಸೇಡಂ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ,ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕನಕಪ್ಪ ದಂಡಗುಲಕರ್, ಭಾಗಿರಥಿ ಗುನ್ನಾಪೂರ, ಜ್ಯೋತಿ ಶರ್ಮಾ, ಜಯಶ್ರೀ ಸೂಡಿ, ಸದಾನಂದ ಕುಂಬಾರ, ಡಿ.ಸಿ. ಹೊಸಮನಿ,ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್,ಮಹೇಂದ್ರ ಕೋರಿ, ಅರುಣ ಪಟ್ಟಣಕರ್, ಸುಭಾಷ ಜಾಪೂರ,ರಾಜು ಕುಂಬಾರ, ಭೀಮಯ್ಯ ಗುತ್ತೆದಾರ, ಶರಣು ವಸ್ತ್ರದ್, ರಾಜು ದಂಡಗುಲಕರ್, ಚಂದ್ರಕಾಂತ ಗೊಬ್ಬೂರಕರ್, ದಿನೇಶ ಗೌಳಿ, ಬಸವರಾಜ ಬಿರಾದಾರ, ಸಿದ್ರಾಮ ಕುಸಾಳೆ, ಮಹಾದೇವ ಗೊಬ್ಬೂರಕರ್,ಜಗದೇವ ಸುಬೇದಾರ, ಬಸವರಾಜ ಇಂಗಿನಶೆಟ್ಟಿ,ತಿಮ್ಮಣ್ಣ ಕುರುಡೆಕರ್,ಶಶಿಕಲಾ ಸಜ್ಜನ್,ಸುನೀತಾ ದೇವದಾಸ, ಮಂಜುನಾಥ ವಾರದ, ರೇವಣಸಿದ್ದ ಮತ್ತಿಮಡು, ದೇವೆಂದ್ರಪ್ಪ ಯಲಗೋಡಕರ್, ಪರಮಾನಂದ ಯಲಗೋಡಕರ್,ರಾಜು ಕೋಬಾಳ,ಕಾಶಣ್ಣ ಚನ್ನೂರ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…