ಮೊರಾರ್ಜಿ ದೇಸಾಯಿ ಪದವಿಪೂರ್ವ ಬಾಲಕಿಯರ ವಸತಿ ಕಾಲೇಜು ಪ್ರವೇಶ ಪಡೆಯಲು ಅರ್ಜಿ ಆಹ್ವಾನ

0
47

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ಸಾಲಿಗೆ ದಂಡೋತಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಹಾಗೂ ಕಲಬುರಗಿಯ ಮದಿನಾ ಕಾಲೋನಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ. ಪಾಸಾದ ಅಲ್ಪಸಂಖ್ಯಾತರ ಹಾಗೂ ಇತರೆ ವರ್ಗದ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ತಿಳಿಸಿದ್ದಾರೆ.

ಸದರಿ ಕಾಲೇಜುಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ.

Contact Your\'s Advertisement; 9902492681

ಅರ್ಹ ವಿದ್ಯಾರ್ಥಿನಿಯರು 2021ರ ಆಗಸ್ಟ್ 25ರ ಸಂಜೆ 5-30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಂಡೋತಿ ವಸತಿ ಶಾಲೆಯ ಮೊಬೈಲ್ ಸಂಖ್ಯೆ 8904564776 ಹಾಗೂ ಕಲಬುರಗಿಯ ವಸತಿ ಶಾಲೆಯ ಮೊಬೈಲ್ ಸಂಖ್ಯೆ 9972564776ಗೆ ಸಂಪರ್ಕಿಸಲು ಕೋರಲಾಗಿದೆ.

ಇದಲ್ಲದೇ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳು, ಕಲಬುರಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ.08472-247260, ಸಹಾಯವಾಣಿ ಸಂಖ್ಯೆ:8277799990 ಹಾಗೂ https://dom.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here