ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆ ಅರ್ಜಿ ಆಹ್ವಾನ

0
18

ಕಲಬುರಗಿ: ಕೋವಿಡ್-19 ಸಾಂಕ್ರಾಮಿಕದಿಂದ ಪೋಷಕರಿಬ್ಬರನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ “ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್” (PM CARES For Children) ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬೇಕೆಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದಿಂದ ದಿನಾಂಕ: 11-03-2020 ಹಾಗೂ ನಂತರ ಇಬ್ಬರು ಪೋಷಕರನ್ನು, (Surviving Parent)/ ಕಾನೂನು ಬದ್ಧ, ದತ್ತು ಪೋಷಕರನ್ನು ಕಳೆದುಕೊಂಡಿರುವ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಜೀವನ ನಿರ್ವಹಿಸಲು ಅನುವಾಗುವಂತೆ ತಕ್ಷಣ ನೆರವು ಜೊತೆಗೆ ಪ್ರತಿ ಮಗುವಿಗೆ 23 ವರ್ಷ ವಯಸ್ಸು ತುಂಬಿದ ನಂತರ ತಲಾ 10 ಲಕ್ಷ ರೂ.ಗಳನ್ನು ನೀಡಲು ಪ್ರಧಾನಮಂತ್ರಿಗಳು ಈ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

Contact Your\'s Advertisement; 9902492681

ಅರ್ಹ ಫಲಾನುಭವಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಒಂದನೇ ಮಹಡಿ, ಸರ್ಕಾರಿ ವೀಕ್ಷಣಾಲಯ ಕಟ್ಟಡ, ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರಿಗೆಯಿರುವ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here