ಭೂಪಾಲ್ ಪೊಲೀಸರ ಲಾಠಿಚಾರ್ಜ್ಗೆ ಖಂಡನೆ

0
29

ಕಲಬುರಗಿ : ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಿನ್ನೆ ಉದ್ಯೋಗಕ್ಕಾಗಿ ಪ್ರತಿಭಟನೆ ನಡೆಸಿದ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರೋಧಿಸಿ ಮತ್ತು ಬಂಧಿತ ಪ್ರತಿಭಟನಾನಿರತರ ಬಿಡುಗಡೆಗೆ ಆಗ್ರಹಿಸಲಾಯಿತು.

ಪೊಲೀಸರ ಈ ಹೇಯ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತಾ, ಈ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ನಿರುದ್ಯೋಗಿ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರು ಹಾಗೂ ಎ ಐ ಡಿ ವೈ ಓ ನ ಎಲ್ಲಾ ಮುಖಂಡರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಮತ್ತು ಬಂಧಿತರನ್ನು ಬೇಷರತ್ ತ್ತಾಗಿ ಈ ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈ ಗೊಳ್ಳಲು ಒತ್ತಾಯಿಸಿ ಇಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ)ಜಿಲ್ಲಾ ಸಮಿತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಕಲಬುರ್ಗಿ ಇವರ ಮುಖಾಂತರ ಮಾನ್ಯ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಎಸ್. ಎಚ್.,ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ ಪಾಣೇಗಾಂವ್, ಶಿವಕುಮಾರ್ ಕುಸಾಳೆ, ಸತೀಶ್ ಪಟ್ಟಣ, ಉಮೇಶ್ ಸಂಕನೂರ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here