ಶಹಾಬಾದ: ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ನಗರದ ಸ್ವಚ್ಚತೆಗೆ ಆದ್ಯತೆ ನೀಡುವ ಮೂಲಕ ರಾಷ್ಟ್ರಪಿತ ಗಾಂಧೀಜಿ ಅವರು ಕಂಡ ಕನಸನ್ನು ನನಸು ಮಾಡಲು ಮುಂದೆ ಬರಬೇಕೆಂದು ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್ ಹೇಳಿದರು.
ಅವರು ನಗರಸಭೆಯ ಕಾರ್ಯಾಲಯ ಮತ್ತು ಸಾಮ್ರಾಟ ಅಶೋಕ ಚಾರಿಟೇಬಲ್ ಟ್ರಸ್ಟ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಯ ಅಡಿಯಲ್ಲಿ ಬೀದಿ ನಾಟಕ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದ ಸ್ವಚ್ಚತೆ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದೆ ಬರಬೇಕು. ಸ್ವಚ್ಛ ಭಾರತ ಅಭಿಯಾನವೂ ಸ್ವಚ್ಛತೆಗೆ ಮಾತ್ರ ಸಿಮೀತವಾಗದೇ ನಗರದ ಸಮಗ್ರ ಅಭಿವೃದ್ಧಿಗೂ ಪ್ರೇರಣೆಯಾಗಬೇಕು. ಅದಕ್ಕಾಗಿ ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನೀಡಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಎಸೆಯದೇ ಕಸ ಸಂಗ್ರಹ ಮಾಡುವ ವಾಹನ ಬಂದಾಗ ನೀಡಬೇಕು.
ಅದಕ್ಕಾಗಿ ನಗರಸಭೆಯಿಂದ ನಿಮ್ಮ ಮನೆಯ ಮುಂದೆ ಕಸ ಸಂಗ್ರಹ ಮಾಡುವ ವಾಹನ ವ್ಯವಸ್ಥೆ ಮಾಡಿದ್ದಾರೆ.ಕಸವನ್ನು ಮನೆಯ ಮುಂದೆ, ಚರಂಡಿಗಳಲ್ಲಿ ಎಸೆಯುವುದರಿಂದ ರೋಗಗಳ ತಾಣವಾಗಿ ಮಾರ್ಪಟ್ಟು ನಮ್ಮ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಓಂ ಸಾಯಿ ಕಲಾ ತಂಡದಿಂದ ಶೌಚಾಲಯ ಬಳಕೆ, ಒಣಕಸ-ಹಸಿ ಕಸ,ಪ್ಲಾಸ್ಟಿಕ್ ಬಳಕೆಯ ಹಾನಿ, ಸರಾಯಿಯಿಂದಾಗುವ ತೊಂದರೆ ಇತರ ವಿಷಯಗಳ ಕುರಿತು ನಗರದ ಜನರಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.
ನೈರ್ಮಲ್ಯ ನಿರೀಕ್ಷಕ ಶಿವರಾಜಕುಮಾರ, ಸಮುದಾಯ ಸಂಘಟಕ ಅಧಿಕಾರಿ ರಘೂನಾಥ ನರಸಾಳೆ, ಸಾಮ್ರಾಟ ಅಶೋಕ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಯಲ್ಲಪ್ಪ ಮ್ಯಾಕೇರಿ,ನಗರಸಭೆಯ ಸದಸ್ಯ ಶ್ರವಣಕುಮಾರ,ಶರಣು ಪಗಲಾಪೂರ, ಅರುಣ ಜಾಯಿ ಇತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…