ಸುರಪುರ: ತಾಲೂಕಿನಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ಹಲ್ಲೆ ತಡೆಯುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಮಲ್ಲಿಕಾರ್ಜುನ ಕ್ರಾಂತಿ ಆರೋಪಿಸಿ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ತಾಲೂಕಿನಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಅನೇಕ ಪ್ರಕರಣಗಳು ನಡೆದಿವೆ,ಇದರ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ,ಆದರೆ ಪೊಲೀಸರು ಹಲ್ಲೆ ನಡೆಸಿದವರನ್ನು ಬಂಧಿಸಿ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ,ಇದರಿಂದ ಹಲ್ಲೆಗಳು ಹೆಚ್ಚುತ್ತಿವೆ ಎಂದರು.
ಮಾಲಗತ್ತಿ ಗ್ರಾಮದಲ್ಲಿ ದಲಿತ ದಂಪತಿಗಳ ಮೇಲೆ ಹಲ್ಲೆ ನಡೆದು ಅನೇಕ ದಿನಗಳಾಗಿವೆ,ಆದರೆ ಇದುವರೆಗೂ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತಿಲ್ಲ.ಇನ್ನು ಚಿಕ್ಕನಹಳ್ಳಿ ಗ್ರಾಮದಲ್ಲಿ ಎರಡು ದಲಿತ ಕುಟುಂಬಗಳು ಸರ್ವೇ ನಂಬರ್ 27 ರಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿವೆ.ಆದರೆ ತಹಸೀಲ್ದಾರರು ಅದೇ ಭೂಮಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಮುಂದಾಗಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂತಹ ಅನೇಕ ಪ್ರಕರಣಗಳು ಜರುಗುತ್ತಿದ್ದು ಇದನ್ನು ತಡೆಯುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ.ಕೂಡಲೇ ಈ ಎಲ್ಲಾ ಬೇಡಿಕೆಗಳು ಈಡೇರಿಸದಿದ್ದಲ್ಲಿ ಇದೇ ತಿಂಗಳ 23ನೇ ತಾರೀಖು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಹಸನಾಪುರ, ಮಾನಪ್ಪ ಬಿಜಾಸಪುರ,ಖಾಜಹುಸೇನ ಗುಡಗುಂಟಿ,ಜಟ್ಟೆಪ್ಪ ನಾಗರಾಳ,ರಾಮಣ್ಣ ಶೆಳ್ಳಗಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…