ಕಲಬುರಗಿ: ಈಗ ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ್ತು ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆಗೆ ಯುವ ಮೋರ್ಚಾವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಸಮರ್ಥವಾಗಿರುವ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ರಾಜ್ಯಾದ್ಯಂತ ನಿರಂತರ ಪ್ರವಾಸ ಮಾಡಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಹೇಳಿದರು.
ಅವರು ವಿಜಯಪುರ, ಬಾಗಲಕೋಟೆ, ಮತ್ತು ಯಾದಗಿರಿ ಜಿಲ್ಲೆಗಳ ಸಂಘಟನಾತ್ಮಕ ಪ್ರವಾಸ ಕೈಗೊಳ್ಳಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಯುವ ಮೋರ್ಚಾ ಪದಾಧಿಕಾರಿಗಳು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿ ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡಲು ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಳ್ಳುಲಾಗುವುದು ಎಂದರು.
ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಅವರನ್ನು ಕಲಬುರಗಿ ಜಿಲ್ಲಾ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು.
ಸಂದರ್ಭದಲ್ಲಿ ಕಲಬುರಗಿ ಮಹಾನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಯುವ ಮೋರ್ಚಾ ಅಧ್ಯಕ್ಷ ಪ್ರವೀಣ ತೆಗನೂರ, ಉಪಾಧ್ಯಕ್ಷ ಶಿವ ಅಷ್ಠಗಿ, ಪ್ರಧಾನ ಕಾರ್ಯದರ್ಶಿಗಳಾದ ವೀರೇಂದ್ರ ಪಾಟೀಲ್, ವಿನಯ್ ವಲ್ಲ್ಯಾಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರೀತಮ್ ಪಾಟೀಲ್, ಸುನೀಲ್ ಮಂತಟ್ಟಿ, ನಗರ ಪ್ರಧಾನ ಕಾರ್ಯದರ್ಶಿ ಮಹೇಶ್ ಚವ್ಹಾಣ, ಸೌರಭ ರಂಗದಾಳ, ಶಿವಮೂರ್ತಿ ಸಣ್ಣೂರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…