ಕಲಬುರಗಿ: ಗ್ರಾಮೀಣ ವೃತ್ತದ ಸಿಪಿಐ ಶಂಕರಗೌಡ ಪಾಟೀಲ ಇವರಿಗೆ 2021ನೇ ಸಾಲಿನ ಸ್ವಾತಂತ್ರೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ಸೇವಾ ಪದಕ ಲಭಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್ ಹಾಗೂ ಜಿಲ್ಲೆಯ ಎಲ್ಲಾ ಪೆÇಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಪದಕ ಪಡೆದ ಸಿಪಿಐ ಶಂಕರಗೌಡ ಪಾಟೀಲ ಅವರು ತಮ್ಮ ಸೇವಾ ಅವಧಿಯಲ್ಲಿ ಹಲವಾರು ಪ್ರಕರಣಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕರ್ತವ್ಯ ನಿರ್ವಹಿಸಿದ್ದಾರೆ.
2019ರಲ್ಲಿ ಚಿಂಚೋಳಿ ತಾಲೂಕಿನ ಯಾಕಾಪೂರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಕೇವಲ 22 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿದ್ದ ಪರಿಣಾಮ ತ್ವರಿತವಾಗಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿರುತ್ತದೆ.
ಹೀಗೆ ಇವರು ಇಲಾಖೆಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಉತ್ತಮ ಮಟ್ಟದ ಸಾಧನೆ ಮಾಡಿದ್ದಕ್ಕಾಗಿ ಇವರ ಸೇವೆಯನ್ನು ಮೆಚ್ಚಿ ರಾಷ್ಟ್ರಪತಿ ಸೇವಾ ಪದಕ ನೀಡಿ ಗೌರವಿಸಿರುವುದು ಇಲಾಖೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…