ಸದ್ಭಾವನಾ ದಿನಾಚರಣೆ: ಪ್ರತಿಜ್ಞಾವಿಧಿ ಬೋಧನೆ

0
10

ಶಹಾಬಾದ: ನಗರಸಭೆಯ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಮಾತನಾಡಿದ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಅವರು ಎಲ್ಲಾ ಧರ್ಮ, ಭಾμÉ ಹಾಗೂ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡುವುದು ಸದ್ಭಾವನಾ ದಿನದ ಉದ್ದೇಶವಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.

Contact Your\'s Advertisement; 9902492681

ನಂತರ ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾμÉಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ. ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ’ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಗರಸಭೆಯ ಸದಸ್ಯ ಅವಿನಾಶ ಕಂಬಾನೂರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಅನೀಲ ಹೊನಗುಂಟಿಕರ್, ರಾಹುಲ್ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here