ಹೊಸಪೇಟೆ(ವಿಜಯನಗರ): ನಮ್ಮ ಪುರಾತನ ಸಂಸ್ಕøತಿ, ಶ್ರೀಮಂತ ಪರಂಪರೆ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸಲು ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯ ಮತ್ತು ಶ್ರೀಕೃಷ್ಣದೇವರಾಯ ಹಾಗೂ ಅವರ ಆಡಳಿತದ ಶೈಲಿ ಪಠ್ಯಕ್ರಮದ ಭಾಗವಾಗಬೇಕು ಮತ್ತು ಇದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ಶ್ರೀಕೃಷ್ಣದೇವರಾಯ ಮತ್ತು ಈ ಸಾಮ್ರಾಜ್ಯದ ಬಗ್ಗೆ ಬಗ್ಗೆ ಇತಿಹಾಸಕಾರರು ಹೆಚ್ಚಿನ ಒತ್ತು ನೀಡಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಹೇಳಿದರು.
ಹಂಪಿಯ ವಿಶ್ವಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿದರ ನಂತರ ಅವರು ವಿಜಯ ವಿಠ್ಠಲ ಮಂದಿರ ಆವರಣದಲ್ಲಿರುವ ಕಲ್ಲಿನ ರಥದ ಎದುರುಗಡೆ ಅವರು ಮಾತನಾಡಿದರು.
ಶ್ರೀ ಕೃಷ್ಣ ದೇವರಾಯ ಕೇವಲ ಓರ್ವ ರಾಜನಾಗಿರದೇ ಅವರು ಪ್ರಜೆಗಳನ್ನು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಿದ್ದ ಸಂಸ್ಕøತಿ,ಸಂಗೀತ,ಶಿಕ್ಷಣ ಮತ್ತು ಉತ್ತಮ ಆಡಳಿತಕ್ಕೆ ಒತ್ತು ನೀಡಿದ್ದ ಎಂದು ಹೇಳಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ದೇಶದ ಯುವಪೀಳಿಗೆ ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಗೆ ಭೇಟಿ ನೀಡಬೇಕು; ಈ ಮೂಲಕ ಗತವೈಭವದಿ ಮೆರೆದ ನಮ್ಮ ಶ್ರೀಮಂತ ಸಾಮ್ರಾಜ್ಯ ಮತ್ತು ಸುಂದರ ವಾಸ್ತುಶಿಲ್ಪಶೈಲಿಯ ಬಗ್ಗೆ ಹೆಮ್ಮೆ ಪಡುವ ಮತ್ತು ತಿಳಿದುಕೊಳ್ಳುವ ಕೆಲಸ ಮಾಡಬೇಕು ಎಂದರು.
ಹಂಪಿ ಹಾಗೂ ಸುತ್ತಮುತ್ತಲಿನ ಸ್ಮಾರಕಗಳು ಸಂರಕ್ಷಿಸುವುದಕ್ಕೆ ಸಾರ್ವಜನಿಕರು ಕೈಜೋಡಿಸಬೇಕು; ಅದರಲ್ಲೂ ವಿಶೇಷವಾಗಿ ಈ ಭಾಗದ ಜನರು ಸ್ಮಾರಕಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಎಎಎಸ್‍ಐ ಜೊತೆ ಕೈಜೋಡಿಸಬೇಕು ಎಂದರು.
ವಿಜಯನಗರ ಸಾಮ್ರಾಜ್ಯದ ವಿಶ್ವಪಾರಂಪರಿಕ ತಾಣಗಳನ್ನು ನೋಡಿ ತುಂಬಾ ಸಂತಸವಾಗಿದೆ ಎಂದರು.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಎಂ.ಉಷಾ ಮತ್ತಿತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…