ಸುರಪುರ: ಭಾರತ ದೇಶದಲ್ಲಿನ ಪ್ರತಿಯೊಬ್ಬ ವ್ಯಕ್ತಿಯು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಮತ್ತು ಎಲ್ಲರು ದೇಶಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಹೋರಾಟಗಾರ ರಾಜಾ ಪಿಡ್ಡ ನಾಯಕ ಕರೆ ನೀಡಿದರು.
ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ದೇಶಪ್ರೇಮವನ್ನು ಯುವಕರಲ್ಲಿ ಮೂಡಿಸುವ ಕೆಲಸವನ್ನು ವಿಶ್ವ ಹಿಂದು ಪರಿಷತ್ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸಂಘದ ಜೊತೆಗೆ ಸೇರಿ ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಜೊತೆಗೆ ಸಂಘವನ್ನು ಬೆಳೆಸುವ ನಿಟ್ಟಿನಲ್ಲಿ ಚಿಂತನೆಗಳು ಬೆಳೆಸಿಕೊಳ್ಳಬೇಕು ಅಂದಾಗ ಮುಂದಿನ ಪೀಳಿಗೆಗೆ ದೇಶಪ್ರೇಮವನ್ನು ಧರ್ಮ ಪ್ರೇಮವನ್ನು ಧಾರೆ ಎರೆಯಲು ಸಾಧ್ಯವಿದೆ ಎಂದರು.
ಇದೇ ಸಂದರ್ಭದಲ್ಲಿ ಅನೇಕ ಯುವಕರು ಮಾತನಾಡಿ,ಮುಂಬರುವ ದಿನಗಳಲ್ಲಿ ವಿಶ್ವ ಹಿಂದು ಪರಿಷತ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳನ್ನು ನೇಮಕಗೊಳಿಸಿ ಪ್ರತಿ ಗ್ರಾಮಗಳಲ್ಲೂ ವಿಹೆಚ್ಪಿ ಬೆಳೆಸೋಣ ಎಂದರು.ಇದೇ ಸಂದರ್ಭದಲ್ಲಿ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಸಚಿನ ಕುಮಾರ ನಾಯಕ,ಶಂಕರಗೌಡ ಮಾಲಿ ಪಾಟೀಲ,ಗುರುನಾಥರಡ್ಡಿ,ಸಚಿನ ಕುಮಾರ ಹಳ್ಳದಮನಿ,ಶಂಕರ ಪ್ಯಾರಸಲ್ರ,ಲಕ್ಷ್ಮೀಕಾಂತ,ಜೆಟ್ಟೆಪ್ಪ ಚೆಳ್ಳಿಗಿಡ,ಅಂಬ್ರೇಶ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…