ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2021-22ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಕಡ್ಡಾಯವಾಗಿ ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್ (ಎಸ್.ಎಸ್.ಪಿ.) ಮೂಲಕ ಅರ್ಜಿ ಸಲ್ಲಿಸಬೇಕೆಂದು ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಅಧಿಕಾರಿಗಳಾದ ಸಾಧಿಕ ಹುಸೇನ್ ಖಾನ್ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಆಫ್‍ಲೈನ್ (ಮ್ಯಾನುವಲ್) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋರ್ಟಲ್ https://ssp.postmatric.karnataka.gov.in/2021 ಮೂಲಕ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9535775700, 9353357502ಗಳಿಗೆ ಸಂಪರ್ಕಿಸಲು ಕೋರಲಾಗಿದೆ.