ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆ ವಾರ್ಡ್ ಸಂಖ್ಯೆ 4 ಹಾಗೂ 23ರ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನಾ ಕಾರ್ಯವು ಮಂಗಳವಾರ ಜರುಗಿದ್ದು, ಸಲ್ಲಿಕೆಯಾದ 4 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಮಹಾಂತೇಶ ಮುಡಬಿ ಅವರು ತಿಳಿಸಿದ್ದಾರೆ.
ವಾರ್ಡ್ ಸಂಖ್ಯೆ 4ಕ್ಕೆ ಎರಡು ನಾಮಪತ್ರ ಹಾಗೂ ವಾರ್ಡ್ ಸಂಖ್ಯೆ 23ಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರಗಳ ಪರಿಶೀಲನಾ ಕಾರ್ಯದ ನಂತರ ಒಟ್ಟಾರೆ 4 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಅವರು ತಿಳಿಸಿದ್ದಾರೆ.