ಕನ್ನಡ ಅಂಕವೀರರಿಗೆ ಪ್ರಶಸ್ತಿ ಪ್ರದಾನ 29 ರಂದು

0
36

ಕಲಬುರಗಿ: ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದರಿಂದ ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂಬ ಆಶಾಭಾವನೆಯೊಂದಿಗೆ ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನವು ಕಳೆದೊಂದು ದಶಕದಿಂದ ಹಮ್ಮಿಕೊಂಡು ಬರುತ್ತಿರುವ ಹತ್ತನೇ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ‘ಹತ್ತರ ಕನ್ನಡಕೆ…ಗುಣಾಗ್ರಣಿ’ ಪ್ರಶಸ್ತಿ ಪ್ರದಾನ ಸಮಾರಂಭ ಆಗಷ್ಟ್ 29 ರ ಬೆಳಗ್ಗೆ 10.45 ಕ್ಕೆ ನಗರದ ಸರಕಾರಿ ಶಿಕ್ಷಕೀಯರ ತರಬೇತಿ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಫ್ರತಿಷ್ಠಾನದ ಸಂಸ್ಥಾಪಕರೂ ಆದ ಜಿಲ್ಲಾ ಕಸಾಪ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿಂದು ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಗಲತಿಪ್ಪಿ, ಕನ್ನಡ ಜೇನಿಗಿಂತ ಸಿಹಿಯಾದ ಭಾಷೆಯಾಗಿದೆ. ಆದರೆ, ಆಂಗ್ಲ ಭಾಷೆಯ ವ್ಯಾಮೋಹದಿಂದ ಇಂದು ಕನ್ನಡಕ್ಕೆ ಕುತ್ತು ಬಂದಿದೆ. ಅವಶ್ಯಕತೆಗೆ ಬೇಕಾದಷ್ಟು ಮಾತ್ರ ಅನ್ಯ ಭಾಷೆಯನ್ನು ಕಲಿಯಬೇಕು. ಅಲ್ಲದೇ ಮಾತೃ ಭಾಷಾಭಿಮಾನ ಬೆಳೆಸಿಕೊಳ್ಳಬೇಕು.

Contact Your\'s Advertisement; 9902492681

ಜೀವನಕ್ಕೆ ಉಸಿರು ಎಷ್ಟು ಮುಖ್ಯವೋ ಹಾಗೆಯೇ ಕನ್ನಡವನ್ನು ನಮ್ಮ ಉಸಿರಾಗಿಸಿಕೊಳ್ಳಬೇಕೆಂಬ ವಿಚಾರಗಳನ್ನು ಇಂದಿನ ವಿದ್ಯಾರ್ಥಿ ಮತ್ತು ಯುವ ಪೀಳಿಗೆಯಲ್ಲಿ ಬಿತ್ತುವ ಪ್ರಾಮಾಣಿಕ ಪ್ರಯತ್ನ ಇಂಥ ಕಾರ್ಯಕ್ರಮಗಳ ಮೂಲಕ ಮಾಡಲಾಗುತ್ತಿದೆ. ಪ್ರಾಚೀನ ಇತಿಹಾಸದ ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ಬಳಸಿ-ಬೆಳೆಸುವುದರೊಂದಿಗೆ ಕನ್ನಡ ಭಾಷಾ ವ್ಯಾಮೋಹ ಹೆಚ್ಚಿಸಿಕೊಳ್ಳಬೇಕೆಂಬ ಆಶಯ ಈ ಕಾರ್ಯಕ್ರಮ ಹೊಂದಿದೆ ಎಂದು ಅವರು ವಿವರಣೆ ನೀಡಿದರು.

ಹತ್ತನೇ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ತಮ್ಮ ಹೆಸರನ್ನು ನೋಂದಾಯಿಸಿದ್ದು, ಇನ್ನೂ ಅನೇಕ ವಿದ್ಯಾರ್ಥಿಗಳೂ ಸಹ ಅಂದಿನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಲಿದ್ದಾರೆ. ಹೆಚ್ವಿನ ಮಾಹಿತಿಗೆ ವಿಜಯಕುಮಾರ ತೇಗಲತಿಪ್ಪಿ-ಮೊ.98803 49025 ಗೆ ಸಂಪರ್ಕಿಸಲು ಕೋರಿದ್ದಾರೆ.

ಆದರ್ಶ ಶಿಕ್ಷಕ ಶರಣಬಸಪ್ಪ ನರೋಣಿ ನೇತೃತ್ವದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಕನ್ನಡ ಆಂಕವೀರರಿಗೆ ಜಿಪಂ ನ ಸಿಇಓ ಡಾ.ದಿಲೀಷ್ ಶಶಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸರಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಬಸಂತಬಾಯಿ ಡಿ.ಅಕ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಡಿಪಿಐ ಅಶೋಕ ಭಜಂತ್ರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಂಶೋಧಕ ಮುಡುಬಿ ಗುಂಡೇರಾವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ಅಂಬುಜಾ ಪ್ರಶಾಂತ ಶಿವರಾಯನಗೌಡ್ರ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶ್ರೀಕಾಂತ ಪಾಟೀಲ ತಿಳಗೂಳ, ಪ್ರಭವ ಪಟ್ಟಣಕರ್, ಶರಣಬಸಪ್ಪ ನರೋಣಿ, ಶಿವರಾಜ ಅಂಡಗಿ, ಶರಣಬಸವ ಜಂಗಿನಮಠ, ಭುವನೇಶ್ವರಿ ಹಳ್ಳಿಖೇಡ, ಅಂಬುಜಾ ಶಿವರಾಯನಗೌಡ್ರ ಇತರರಿದ್ದರು.

ಕಸಾಪ ಅಧ್ಯಕ್ಷರಾಗುವುದು ಶತಸಿದ್ಧ: ತೇಗಲತಿಪ್ಪಿ ವಿಶ್ವಾಸ

ಕೋವಿಡ್ ಕಾರಣಕ್ಕಾಗಿ ಮುಂದೂಲ್ಪಟ್ಟಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಶೀಘ್ರವೇ ನಡೆಸಲು ಜಿಲ್ಲಾ ಕಸಾಪ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕಳೆದೆರಡು ದಶಕದಿಂದ ಸಾಹಿತ್ಯಿಕ, ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ಹೊಸ ಹೊಸ ಕಾರ್ಯಕ್ರಮಗಳು ಹಮ್ಮಿಕೊಂಡು ಬರುತ್ತಿರುವ ತಮಗೆ ಈ ಬಾರಿ ಜಿಲ್ಲೆಯ ಕಸಾಪ ಸದಸ್ಯರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ನನ್ನ ನಿತ್ಯ ನೂತನ ನಿರಂತರ ಕಾರ್ಯಕ್ರಮಗಳೇ ನನಗೆ ಶ್ರೀರಕ್ಷೆಯಾಗಲಿವೆ ಎಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here