ಬಿಸಿ ಬಿಸಿ ಸುದ್ದಿ

ಶಾಂತಪ್ಪ ಬೂದಿಹಾಳ ಕುರಿತ ಶಾಂತ ಸಿರಿ ಅಭಿನಂಧನಾ ಗ್ರಂಥ ಬಿಡುಗಡೆ: ಸುರೇಶ ಸಜ್ಜನ್

ಸುರಪುರ: ಶಾಂತಪ್ಪ ಬೂದಿಹಾಳ ಅವರು ೫೦ ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅಭಿನಂದನಾರ್ಹವಾಗಿದ್ದು,ಇವರ ೮೦ನೇ ಹುಟ್ಟು ಹಬ್ಬದ ಅಂಗವಾಗಿ ಶಾಂತ ಸಿರಿ ಎನ್ನುವ ಅಭಿನಂದನಾ ಗ್ರಂಥವನ್ನು ಹೊರತರಲಾಗುತ್ತಿದೆ ಎಂದು ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗು ಶಾಂತಪ್ಪ ಬೂದಿಹಾಳ ಅಭಿನಂದನಾ ಸಮಿತಿ ಹಾಗು ಅಭಿನಂದನಾ ಗ್ರಂಥ ಸಮಿತಿ ಅಧ್ಯಕ್ಷ ಸುರೇಶ ಆರ್ ಸಜ್ಜನ್ ಮಾತನಾಡಿದರು.

ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಭವನದಲ್ಲಿ ಬುಧವವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಶಾಂತಪ್ಪ ಬೂದಿಹಾಳರವರ ಅಭಿನಂದನಾ ಗ್ರಂಥ ಬಿಡುಗಡೆ ಹಾಗು ೮೦ನೇ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವನ್ನು ಇದೇ ಅಗಸ್ಟ್ ೨೯ ರಂದು ನಗರದ ಹಸನಾಪುರ ಕ್ರಾಸ್ ಬಳಿಯಲ್ಲಿನ ಕಡೇಚೂರು ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ದೇವಾಪುರ ಹಿರೇಮಠ ಸಂಸ್ಥಾನದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು,ಗುರುಮಿಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವ ವಹಿಸಲಿದ್ದಾರೆ.ನಗರದ ಕಬಾಡಗೇರಾ ನಿಷ್ಠಿ ಕಡ್ಲೆಪ್ಪನವರ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮಿಯವರ ಸಮ್ಮುಖದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಸ್ಥಳಿಯ ಶಾಸಕರು ಹಾಗು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಲಿದ್ದಾರೆ.ಅ

ಭಿನಂದನಾ ಗ್ರಂಥವನ್ನು ಗ್ರಂಥಾಲಯ ಇಲಾಖೆಯ ರಾಜ್ಯ ನಿರ್ದೇಶಕರಾದ ಡಾ: ಸತೀಶ ಕುಮಾರ ಹೊಸಮನಿ ಬಿಡುಗಡೆಗೊಳಿಸಲಿದ್ದಾರೆ ಹಾಗು ಕಲಬುರಗಿಯ ಪ್ರಾದ್ಯಾಪಕರಾದ ಡಾ: ಕಲ್ಯಾಣರಾವ್ ಪಾಟೀಲ್ ಗ್ರಂಥ ಪರಿಚಯ ಮಾಡಿಕೊಡಲಿದ್ದು,ಹಿರಿಯ ಸಾಹಿತಿ ಡಾ: ಸ್ವಾಮಿರಾವ್ ಕುಲಕರ್ಣಿ ಅಭಿನಂದನಾ ನುಡಿಗಳನ್ನು ನುಡಿಯಲ್ಲಿದ್ದಾರೆ.ಈ ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ತಾಲೂಕು ವೀರಶೈವ ಸಮಿತಿ ಹಾಗು ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸುರೇಶ ಸಜ್ಜನ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ,ಮಾಜಿ ಜಿ.ಪಂ ಸದಸ್ಯ ಹೆಚ್.ಸಿ ಪಾಟೀಲ್,ಬಸಣ್ಣ ಬುದೂರು,ಮಂಗಳಾ ಪಾಟೀಲ್ ಮುದ್ದೇಬಿಹಾಳ ಹಾಗು ಸುವರ್ಣ ಸುತಾರ ಭಾಗವಹಿಸಲಿದ್ದಾರೆ.ವಿಶೇಷ ಆಹ್ವಾನಿತರಾಗಿ ಬಸವಲಿಂಗಪ್ಪ ಪಾಟೀಲ್,ಡಾ:ಆರ್.ವಿ.ನಾಯಕ,ರಾಜಾ ಹನುಮಪ್ಪ ನಾಯಕ (ತಾತಾ), ಎಸ್.ಎಮ್.ಕನಕರಡ್ಡಿ,ಜಿ.ಎಸ್.ಪಾಟೀಲ್,ರಾಮನಗೌಡ ಸುಬೇದಾರ ಹಾಗು ಕಿಶೋರ ಚಂದ್ ಜೈನ್ ಭಾಗವಹಿಸಲಿದ್ದು,ಶಾಂತಪ್ಪ ಬೂದಿಹಾಳ,ಡಾ:ಚಿ.ಸಿ.ಲಿಂಗಣ್ಣ ,ಪರಿಸರವಾದಿ ಪ.ಮಾನು ಸಗರ ಗೌರವ ಉಪಸ್ಥಿತರಿರಲಿದ್ದಾರೆ ಎಂದರು.

ಆದ್ದರಿಂದ ಈ ಕಾರ್ಯಕ್ರಮಕ್ಕೆ ಎಲ್ಲಾ ಸಾಹಿತ್ಯ ಪ್ರೇಮಿಗಳು,ಎಲ್ಲಾ ಸಂಘಟನೆಗಳ ಮುಖಂಡರು ಹಾಗು ಹೋರಾಟಗಾರರು,ಮತ್ತು ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗು ಕನ್ನಡ ಸಾಹಿತ್ಯ ಸಂಘ ರಂಗಂಪೇಟೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಜೊತೆಗೆ ಎಲ್ಲಾ ಕನ್ನಡ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಶಾಂತಪ್ಪ ಬೂದಿಹಾಳ,ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹಾಗು ಅಭಿನಂದನಾ ಗ್ರಂಥ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago