ಸುರಪುರ: ಶಾಲೆಗಳಲ್ಲಿ ಕಡ್ಡಾಯವಾಗಿ ಕೋವಿಡ್-೧೯ ನಿಯಮಗಳನ್ನು ಪಾಲಿಸುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆ ಮಾಡುವಂತೆ ಲೋಕಾಯುಕ್ತ ಪಿಐ ಅರುಣಕುಮಾರ ತಿಳಿಸಿದರು.
ತಾಲೂಕಿನ ದೇವಾಪುರ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಯಲ್ಲಿನ ಮುಖ್ಯಗುರುಗಳು ಸೇರಿ ಎಲ್ಲರಿಗೂ ನಿರ್ದೇಶನ ನೀಡಿ, ಸರಕಾರ ಈಗಾಗಲೇ ಜಾರಿಗೊಳಿಸಿರುವ ನಿಯಮಗಳಂತೆ ಎಲ್ಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಿ,ಸಾಮಾಜಿಕ ಅಂತರವನ್ನು ಕಾಪಾಡುವುದು ಹಾಗು ಹ್ಯಾಂಡ್ ಸ್ಯಾನಿಟೈಜರ್ ಬಳಸುವ ಜೊತೆಗೆ ಎಲ್ಲಾ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಕೊಠಡಿಗಳನ್ನು,ಅಡುಗೆ ಕೋಣೆಯನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮುಖ್ಯಗುರು ಎಸ್.ಎಸ್.ಕರಿಕಬ್ಬಿ,ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಶ ಮಾಮನಿ,ಹಣಮಂತರಾಯ,ನಾಗರಾಜ,ಬಸವರಾಜ ಹಾಗು ಮಲ್ಲಿಕಾರ್ಜುನ ಸೇರಿದಂತೆ ಶಾಲೆಯ ಶಿಕ್ಷಕರಿದ್ದರು.