ಕಲಬುರಗಿ: ಮಹಾ ನಗರ ಪಾಲಿಕೆಗೆ ಇದೇ ಸೆ. 3 ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಇಲ್ಲಿನ ಕೈಲಾಶ ನಗರ, ಷಹಾಬಜಾರ್ ವ್ಯಾಪ್ತಿಯ ವಾರ್ಡ್ 25 ರಲ್ಲಿ ಕಾಂಗ್ರೆಸ್ ಹುರಿಯಾಳಾಗಿರುವ ರತೀಶ ಕುಮಾರ್ ಭೂಸನೂರ್ ಪರ ಚುನಾವಣೆ ಪ್ರತಾರಕ್ಕೆ ಯುವಕರೇ ಮುಂದಾಗಿ ವಿದ್ಯುಕ್ತ ಚಾಲನೆ ನೀಡಿದ್ದಾರೆ.
ಇದಲ್ಲದೆ ಇದೇ ವಾರ್ಡ್‍ನಲ್ಲಿ ನಡೆದಂತಹ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಡಾವಣೆಯ ಯುವ ಮುಖಂಡ, ಇದುವರೆಗೂ ಬಿಜೆಪಿಯ ಜೊತೆಗಿದ್ದ ಶರಣಗೌq ಪಾಟೀಲ್ ಅವರು ರತೀಶ ಭೂಸನೂರ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಲಬುರಗಿ ಉತ್ತರ ಕಾಂಗ್ರೆಸ್ ಶಾಸಕಿ ಕನೀಜ್ ಫತೀಮಾ, ಅವರ ಪುತ್ರ ಫರ್ಜುಲ್ ಇಸ್ಲಾಂ, ಅಭ್ಯರ್ಥಿ ರತೀಶ ಕುಮಾರ್ ಈ ಸಂದರ್ಭದಲ್ಲಿದ್ದರು. ಇದೇ ವಾರ್ಡ್‍ನಲ್ಲಿ ಕಾಂಗ್ರೆಸ್ ಯುವ ಹಗಟಕ ಅಧ್ಯಕ್ಷ ಶಿವಾನಂದ ಹೊನಗುಂಟೀಕರ್ ಅವರು ತಮ್ಮ ಬೆಂಬಲಿಗರೊಂದಿಗೆ ಬಂದು ರತೀಶ ಕುಮಾರ್ ಭೂಸನೂರ್ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಯುವಕರ ದೊಡ್ಡ ಗುಂಪು ರತೀಶ ಕುಮಾರ್ ಪರ ಪ್ರಚಾರದಲ್ಲಿ ತೊಡಗಿದೆ.
ಕಣದಲ್ಲಿರುವ ಹುರಿಯಾಳು ರತೀಶ ಕುಮಾರ್ ಭೂಸನೂರ್ ಮನೆ ಮನೆ ಸುತ್ತುವ, ಬಡಾವಣೆಗಳಲ್ಲಿ ಸಭೆ ನಡೆಸುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಕೋವಿಡ್ ನಿಯಮಗಳ ಅಡಿಯಲ್ಲಿಯೇ ಪಾಲಿಕೆ ಪ್ರಚಾರ ಸಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…