ಸೇಡಂ: ಸೇಡಂ ಮತಕ್ಷೇತ್ರದ ಚಂದಾಪೂರ, ಕುರಕುಂಟಾ, ಕಿಸ್ತಾಪೂರ ಗ್ರಾಮದ ಮುಖಂಡರು ವಿವಿಧ ಪಕ್ಷಗಳು ತೊರೆದು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ವೇಳೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಮಾತನಾಡಿ ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಸೇಡಂಮತಕ್ಷೇತ್ರದವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಪಂ ಮತ್ತು ತಾಪಂ ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಜನ ಬೇಸರಗೊಂಡಿದ್ದಾರೆ. ಕ್ಷೇತ್ರದ ಜನರು ಬದಲಾವಣೆ ಬಯಸುತ್ತಿದ್ದಾರೆ.
ಇದರಿಂದ ಮುಂಬರವ ತಾಪಂ ಜಿಪಂ ಚುನಾವಣೆಯಲ್ಲಿ ಸೇಡಂ ಮತಕ್ಷೇತ್ರದ ಎಲ್ಲಾ ಜಿ.ಪಂ ತಾ.ಪಂ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿಸಿ ಅತಿ ಹೆಚ್ಚು ಜಿ.ಪಂ-ತಾ.ಪಂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುವ ವಿಶ್ವಾಸ ವಿದೆ. ಈ ಚುನಾವಣೆ ಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶರಣಬಸಪ್ಪ ರಾಮಚಂದ್ರಯ್ಯ, ಹಣಮಂತ ರೆಡ್ಡಿ, ಶರಣಪ್ಪ, ದುರ್ಗಾರೆಡ್ಡಿ, ಭರತರೆಡ್ಡಿ, ಏಕಾಂತ ರೆಡ್ಡಿ,ಗೋಪಾಲ ರೆಡ್ಡಿ, ರಮೇಶ ಗೌಡ, ಜಗನ್ನಾಥ ರೆಡ್ಡಿ, ಪ್ರಕಾಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…