ಆಳಂದ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯ ವೇಗ ಪಡೆದುಕೊಂಡಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಶನಿವಾರ ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ೧೯.೪೫ ಲಕ್ಷ. ರೂಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು.
ಕೋರೊನಾ ಸಾಂಕ್ರಾಮಿಕ ರೋಗದ ನಿರ್ವಹಣೆ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರ ಅನುದಾನ ನೀಡಿದೆ ಮುಂದೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವೆ ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಹೆಚ್ಚುವರಿ ಅನುದಾನ ಬಂದಿದ್ದರ ಫಲವಾಗಿ ಮಿನಿ ವಿಧಾನಸೌಧ ಕಾಮಗಾರಿ ವೇಗ ಪಡೆದುಕೊಂಡಿದೆ ಇದಕ್ಕೆ ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡ ಸರ್ಕಾರಕ್ಕೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ ಬೆಳಂ, ಮುಖಂಡರಾದ ಬಸವಂತರಾವ ಶೇರಿಕಾರ, ಶರಣಬಸಪ್ಪ ಬಿರಾದಾರ, ದಸ್ತಗೀರ್ ಗುಂಜೋಟಿ, ಮಹೇಶ ಮುನ್ನೊಳ್ಳಿ, ಶಾಂತಮಲ್ಲಪ್ಪ ಅಚಲೇರಿ, ಶಿವಶರಣ ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…