ಕೋವಿಡ್ ಮುಕ್ತ ನಗರವನ್ನಾಗಿ ಮಾಡಲು ಕೋವಿಡ್ ಲಸಿಕೆ ಪಡೆಯಿರಿ: ವರ್ಮಾ

0
7

ಶಹಾಬಾದ : ನಗರದ ಸಾರ್ವಜನಿಕರು ಕೋವಿಡ್ ಲಸಿಕೆಯನ್ನು ತೆಗೆದುಕೊಂಡು ಕೋವಿಡ್ ಮುಕ್ತ ನಗರವನ್ನಾಗಿ ಮಾಡಲು ಸಹಕರಿಸಿ ಎಂದು ತಹಸೀಲ್ದಾರ ಸುರೇಶ ವರ್ಮಾ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಅವರು ಶುಕ್ರವಾರ ನಗರದ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಲಾದ ಉಚಿತ ಲಸಿಕಾ ಕೇಂದ್ರಗಳಿಗೆ ಬೇಟಿ ನೀಡಿ ಸಾರ್ವಜನಿಕರಿಗೆ ಮನವಿ ಮಾಡಿದರು.

Contact Your\'s Advertisement; 9902492681

ಲಸಿಕೆಗಳು ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಂಡು ಕೋವಿಡ್-೧೯ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಪೊಲಿಸ್ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ. ಲಸಿಕೆಯು ಸುರಕ್ಷಿತವಾಗಿದ್ದು, ಇದುವರೆಗೆ ಲಸಿಕೆ ಪಡೆದುಕೊಂಡವರಲ್ಲಿ ಯಾರಿಗೂ ಕೂಡ ಗಂಭೀರ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ.

ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಅಲ್ಲದೇ ಈಗಾಗಲೇ ಅನೇಕ ಬಾರಿ ಅಸಿಕಾ ಅಭಿಯಾನವನ್ನು ಕೈಗೊಂಡು ಲಸಿಕಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಲಸಿಕೆ ಬಗ್ಗೆ ಇರುವ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ಸುರಕ್ಷಿತವಾಗಿದೆ. ಲಸಿಕೆ ಬಗ್ಗೆ ತಪ್ಪು ಕಲ್ಪನೆಗಳಿದ್ದರೆ ಬಿಟ್ಟು ಬಿಡಬೇಕು. ಕೋವಿಡ್ ಮುಕ್ತ ಜಿಲ್ಲೆ ನಮ್ಮ ಗುರಿ. ಹೀಗಾಗಿ ಲಸಿಕಾ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಆರೋಗ್ಯ ಕಾಪಾಡಿಕೊಂಡು ಕೊರೊನಾ ಬಗ್ಗೆ ಜಾಗೃತರಾಗಿರಬೇಕು. ಕೋವಿಡ್ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳಿಲ್ಲ. ಹೀಗಾಗಿ ಸಾರ್ವಜನಿಕರೆಲ್ಲರೂ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಅಲ್ಲದೇ ನಗರದ ವ್ಯಾಪಾರ ಸ್ಥಳಗಳಲ್ಲಿ ತೆರಳಿ ವ್ಯಾಪಾರಸ್ಥರಿಗೆ ಲಸಿಕೆ ತೆಗೆದುಕೊಳ್ಳುವಂತೆ ತಿಳಿ ಹೇಳಿದರಲ್ಲದೇ, ಜನಜಂಗುಳಿ ಇರುವ ಪ್ರದೇಶಗಳಲ್ಲಿ ಅನಗತ್ಯ ಓಡಾಡಬಾರದು. ನಾಗರಿಕರು ಸಾಮಾಜಿಕ ಅಂತರ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಷಮ್‌ಖಾನ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here