ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಪ್ರತಿಭಟನೆ

0
8

ಶಹಾಬಾದ : ಮೈಸೂರಿನ ಲಲಿತಾದ್ರಿಪುರ ಬಳಿಯ ನಿರ್ಜನ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ಎಐಡಿಎಸ್‌ಓ, ಎಐಡಿವಾಯ್‌ಓ ಹಾಗೂ ಎಐಎಮ್‌ಎಸ್‌ಎಸ್ ಸಂಘಟನೆಗಳು ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಪ್ರತಿಭಟನಾಕಾರರು ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೆವೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮೈಸೂರಿನಲ್ಲಿ ಅಮಾನವೀಯ ರೀತಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಇದನ್ನು ಇಡೀ ಮಹಿಳಾ ಸಮುದಾಯ ಕಟು ಶಬ್ಧಗಳಲ್ಲಿ ಖಂಡಿಸುತ್ತದೆ. ಈ ಪ್ರಕರಣ ಹಸಿರಾಗಿರುವಾಗಲೇ ತುಮಕೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಇಡೀ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲು ಶಿಕ್ಷೆ ಸಿಗುವಂತೆ ಮಾಡಬೇಕು. ಆ ಮೂಲಕ ಇನ್ನು ಮುಂದೆ ಈ ರೀತಿಯ ಹೇಯ ಕೃತ್ಯಗಳು ನಡೆಯದಂತೆ ಕಿಡಿಗೇಡಿಗಳಲ್ಲಿ ಭಯ ಹುಟ್ಟಿಸಬೇಕು. ಸರ್ಕಾರ ತಮಗೆ ಬೇಕಾದ ಕಾನೂನುಗಳನ್ನು ಜಾರಿಗೆ ತರುತ್ತವೆ.ಅದೇ ರೀತಿ ಇಂತಹ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನನ್ನು ಜಾರಿಗೆ ತಂದು ಸಮಾಜದಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಧೈರ್ಯವಾಗಿ ಸಂಚರಿಸುವ ವಾತಾವರಣವನ್ನು ಸೃಷ್ಟಿಸಬೇಕು ಎಂದು ಒತ್ತಾಯಿಸಿದರು. ದಿಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದಂತೆ ಮೈಸೂರಿನಲ್ಲಿಯೂ ಈ ಘಟನೆ ನಡೆದಿದೆ. ಸರ್ಕಾರ ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಭದ್ರತೆ ಕೊಡುವಲ್ಲಿ ವಿಫಲವಾಗಿದೆ. ಸರ್ಕಾರ ಕೂಡಲೇ ಅತ್ಯಾಚಾರಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಅತ್ಯಾಚಾರಿಗಳಿಗೆ ಪ್ರಚೋದನೆ ನೀಡುವಂತಾ ಅಶ್ಲೀಲ ದೃಶ್ಯಾವಳಿ ಪ್ರಸಾರ ಮಾಡುವ ಆನ್‌ಲೈನ್ ತಾಣಗಳನ್ನೂ ನಿ?ಧ ಮಾಡಬೇಕು ಎಂದು ಆಗ್ರಹಿಸಿದರು.

ಜಗನ್ನಾಥ.ಎಸ.ಎಚ್,ಗುಂಡಮ್ಮ ಮಡಿವಾಳ ,ಸಿದ್ದು ಚೌಧರಿ ,ರಮೇಶ ದೇವಕರ್, ರಘು ಪವಾರ, ಕಿರಣ ಮಾನೆ, ಸಾಕ್ಷಿ , ಮಹದೇವಿ ಮಾನೆ , ಶಿಲ್ಪಾ ಹುಲಿ ,ಶ್ರಿನಿವಾಸ್, ತಿಮ್ಮಣ್ಣ ಮಾನೆ, ಪ್ರವೀಣ ಬಣಮಿಕರ್ ಸೇರಿ ಹಲವಾರು ಜನ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here