ಬಿಸಿ ಬಿಸಿ ಸುದ್ದಿ

ಭ್ರಷ್ಟಾಚಾರ ಮುಕ್ತ, ನ್ಯಾಯಯುತ ಆಡಳಿತಕ್ಕಾಗಿ ಎಸ್ಡಿಪಿಐ ಅಭ್ಯರ್ಥಿಗಳ ಗೆಲುವು ಅನಿವಾರ್ಯ: ಬಿ.ಆರ್.ಭಾಸ್ಕರ್ ಪ್ರಸಾದ್

ಕಲಬುರಗಿ: ಮಹಾನಗರ ಪಾಲಿಕೆಗೆ ಸೆಪ್ಟೆಂಬರ್ 3, 2021 ಶುಕ್ರವಾರದಂದು ಚುನಾವಣೆ ನಡೆಯಲಿದ್ದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಬುದ್ಧತೆಯಿಂದ ಆಯ್ದ 10 ವಾರ್ಡ್ ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭ್ರಷ್ಟಾಚಾರ ಮುಕ್ತ, ನ್ಯಾಯಯುತ ಆಡಳಿತಕ್ಕಾಗಿ ಮಹಾ ನಗರಪಾಲಿಕೆಯ ಒಳಗಡೆ ಎಸ್ಡಿಪಿಐ ಸದಸ್ಯರು ಇರಬೇಕಾಗಿದ್ದು ಅತೀ ಅಗತ್ಯವಾಗಿದೆ. ಎಂದು ಎಸ್ಡಿಪಿಐ ಮುಖಂಡರಾದ ಬಿ.ಆರ್. ಭಾಸ್ಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿ ನಗರದ ಸಮರ್ಪಕ ಅಭಿವೃದ್ಧಿ ನಡೆದಿಲ್ಲ ಮಾತ್ರವಲ್ಲ, ಮೂಲಭೂತ ಸೌಕರ್ಯಗಳಾದ ಉತ್ತಮ ರಸ್ತೆ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಆಟದ ಮೈದಾನ, ಗ್ರಂಥಾಲಯ, ಮಾಹಿತಿ ಕೇಂದ್ರಗಳು, ಸರಕಾರಿ ಶಾಲೆಗಳು, ಆಸ್ಪತ್ರೆಗಳು ಹಾಗೂ ಇನ್ನಿತರ ಅತ್ಯಗತ್ಯ ಸೌಲಭ್ಯಗಳು ಜನರಿಗೆ ಇನ್ನೂ ತಲುಪಿಲ್ಲ. ಜನರು ಭರಿಸುವ ಕೋಟ್ಯಂತರ ರೂಪಾಯಿ ತೆರಿಗೆ ಹಣ ಭ್ರಷ್ಟ ರಾಜಕಾರಣಿಗಳ ಕೈಯಲ್ಲಿ ಪೋಲಾಗುತ್ತಿದೆ. ಕಳೆದ ಹಲವಾರು ವರ್ಷಗಳಲ್ಲಿ ಆಡಳಿತ ನಡೆಸಿದ ಪಕ್ಷಗಳು ಮತ್ತು ಅದರ ಕಾರ್ಪೊರೇಟರ್ ಗಳು ಜನರ ಕ್ಷೇಮಾಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದೆ ಜನರಿಗೆ ದ್ರೋಹ ಬಗೆದಿರುವುದರಿಂದ ಜನರು ಬೇಸತ್ತು ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯದಾದ್ಯಂತ ಸುಮಾರು ಮುನ್ನೂರಕ್ಕೂ ಅಧಿಕ ಚುನಾಯಿತ ಜನಪ್ರತಿನಿಧಿಗಳನ್ನು ಹೊಂದಿದ್ದು ಭ್ರಷ್ಟಾಚಾರ ಮುಕ್ತ, ನ್ಯಾಯಬದ್ಧ, ಕೋಮು ಸೌಹಾರ್ದತೆಯೊಂದಿಗೆ ಜನರಿಗೆ ಅವರ ಹಕ್ಕನ್ನು ನೀಡಲು ಕಟಿಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಪರ್ಯಾಯ ರಾಜಕೀಯಕ್ಕಾಗಿ, ಭಯ ಮುಕ್ತ ಹಸಿವು ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಪಣತೊಟ್ಟಿರುವ ಎಸ್ಡಿಪಿಐಯ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವ ಮೂಲಕ ಧನಾತ್ಮಕ ರಾಜಕೀಯಕ್ಕೆ ಮುನ್ನಡಿ ಬರೆಯಬೇಕಾಗಿರುವುದು ಗುಲ್ಬರ್ಗದ ಜನತೆಗೆ ಅತೀ ಅಗತ್ಯವಾಗಿದೆ. ಆದ್ದರಿಂದ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಗಳಿಗೆ ಜನರು ಮತ ನೀಡಿ ಆಶೀರ್ವದಿಸಿ ನಿಮ್ಮ ಸೇವೆಗೆ ಅನುವು ಮಾಡಿಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ. ಎಸ್ಡಿಪಿಐ ಗೆಲುವು ಖಂಡಿತವಾಗಿಯೂ ಜನರ ಗೆಲುವಾಗಲಿದೆ. ಎಂದು ಪತ್ರಿಕಾಗೋಷ್ಠಿಯಲ್ಲಿ ಬಿ.ಆರ್ ಭಾಸ್ಕರ್ ಪ್ರಸಾದ್ ಮನವಿ ಮಾಡಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಗುಲ್ಬರ್ಗ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಅಬ್ದುಲ್ ರಹೀಂ ಪಟೇಲ್, ಜಿಲ್ಲಾಧ್ಯಕ್ಷರಾದ ಮಹಮ್ಮದ್ ಮೊಹಿಸಿನ್ ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

9 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

20 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

20 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

22 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

22 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

22 hours ago