ಸೇಡಂ: ಕ್ಷೇತ್ರದ ಅಭಿವೃದ್ಧಿಗಾಗಿ ನನ್ನ ಉಸಿರು ಇರುವವರೆಗೂ ದುಡಿಯುವೆ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರು ಇಲ್ಲಿ ಹೇಳಿದರು.
ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದ ಯಾವುದೇ ಭಾಗದಲ್ಲಿ ಅಭಿವೃದ್ಧಿಯ ಕೆಲಸ ಮಾಡುವ ಅವಶ್ಯಕತೆ ಇದೆ ಎಂಬುದರ ಕುರಿತು ವಿವರ ನೀಡಿದರೆ ಶೀಘ್ರವೇ ಅನುದಾನ ತರಿಸಿ ಕೆಲಸ ಮಾಡಿಸುವೆ ಎಂದರು.
ಪ್ರಸಕ್ತ ಬಿಜೆಪಿಯ ಸಂಘಟನಾ ಪರ್ವದಡಿ 75000 ಸದಸ್ಯತ್ವವನ್ನು ಹೊಂದುವ ಗುರಿ ಇದೆ. ಪ್ರತಿ ಬೂತ್ ಮಟ್ಟದಲ್ಲಿ 300 ಜನ ಸದಸ್ಯತ್ವ ತೆಗೆದುಕೊಳ್ಳುವ ರೀತಿಯಲ್ಲಿ ಕಾರ್ಯಕರ್ತರು ನಿರೀಕ್ಷೆಗೂ ಮೀರಿದ ಕೆಲಸವನ್ನು ಮಾಡಬೇಕು ಎಂದು ಅವರು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಎರಡು ಕೋಟಿ ರೂ.ಗಳ ಅನುದಾನ ಕೊಡಲು ನಾನು ಸಿದ್ಧನಿದ್ದೇನೆ. ಗ್ರಾಮೀಣ ಭಾಗದಲ್ಲಿ ಯಾವುದೇ ಕೆಲಸವಿದ್ದರೂ ಸಹ ಅದನ್ನು ಒಂದೇ ವಾರದಲ್ಲಿ ಕೈಗೊಳ್ಳಲು ಆದ್ಯತೆ ನೀಡುವೆ. ಕಾರ್ಯಕರ್ತರು ಜನರ ಬೇಡಿಕೆಗಳನ್ನು ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಅವರು ಸಲಹೆ ಮಾಡಿದರು.
ಸದಸ್ಯತ್ವ ಅಭಿಯಾನಾ ಜಿಲ್ಲಾ ಸಂಚಾಲಕ ರಾಜು ನಿಲಂಗಿ, ಸಹ ಸಂಚಾಲಕ ಲಿಂಗರಾಜ್ ಬಿರಾದಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗಪ್ಪ ಕೊಳ್ಳಿ, ಹಿರಿಯ ಮುಖಂಡ ಪರ್ವತರೆಡ್ಡಿ ಪಾಟೀಲ್ ನಾಮವಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಶರಣು ಮೆಡಿಕಲ್, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಅಡಕಿ, ನಗರಾಧ್ಯಕ್ಷ ಅನಿಲ್ ಐನಾಪೂರ್, ಮುಖಂಡರಾದ ಮುಕುಂದ್ ದೇಶಪಾಂಡೆ, ಶಿವಲಿಂಗರೆಡ್ಡಿ ಬೆನಕನಹಳ್ಳಿ, ಬಸವರಾಜ್ ರೇವಗೊಂಡ್, ನಾಗೇಂದ್ರಪ್ಪ ಸಾಹುಕಾರ್ ದುಗನೂರ್ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…