ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020-2021ನೇ ಸಾಲಿನ ಸೆಪ್ಟಂಬರ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕಗಳನ್ನು ವಿಸ್ತಿರಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ CCERF,CCEPF CCERR, CCEPR, NSR ಮತ್ತು NSPR ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‍ಲೋಡ್ ಮಾಡಲು 30ನೇ ಆಗಸ್ಟ್ 2021 ರಿಂದ 4ನೇ ಸೆಪ್ಟಂಬರ್ 2021 ರವರೆಗೆ, ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿದ 31ನೇ ಆಗಸ್ಟ್ 2021 ರಿಂದ 06ನೇ ಸೆಪ್ಟಂಬರ್ 2021ರವರೆಗೆ ಹಾಗೂ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಂಡು ಬ್ಯಾಂಕ್‍ಗೆ ಜಮೆ ಮಾಡಲು ನಿಗದಿಪಡಿಸಿದ 2ನೇ ಸೆಪ್ಟಂಬರ್2021 ರಿಂದ 08ನೇ ಸೆಪ್ಟಂಬರ್ 2021ರವರೆಗೆ ವಿಸ್ತರಿಸಲಾಗಿದೆ.
2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಪರೀಕ್ಷಾ ಶುಲ್ಕವನ್ನು ಹಳೆಯ ಪದ್ದತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ 2ನೇ ಸೆಪ್ಟಂಬರ್ 2021 ರಿಂದ 08ನೇ ಸೆಪ್ಟಂಬರ್ 2021ರವರೆಗೆ ವಿಸ್ತರಿಸಲಾಗಿದೆ.
CCERF, CCEPF, CCERR, CCEPR, NSR ಮತ್ತು NSPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನೊಳಗೊಂಡಂತೆ ಶಾಲಾ ಲಾಗಿನ್‍ನಲ್ಲಿ ಸೃಜಿಸಲಾಗುವ ಚಲನ್ ಬಳಸಿಕೊಂಡು ಶುಲ್ಕ ಪಾವತಿಸಿದ ಮೂಲ ಚಲನ್, 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಎಂಎಸ್‍ಎ ಮತ್ತು ಹಿಂದಿನ ಪದ್ದತಿಯಂತೆ ಮಂಡಳಿ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್, ನಾಮಿನಲ್‍ರೋಲ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ನಿಗದಿಪಡಿಸಿದ ದಿನಾಂಕ 07ನೇ ಸೆಪ್ಟಂಬರ್ 2021 ರಿಂದ 14ನೇ ಸೆಪ್ಟಂಬರ್ 2021 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…