ಕಲಬುರಗಿ: ಶಿಶು ಅಭಿವೃದ್ಧಿ ಯೋಜನೆಯಡಿ 2021-22ನೇ ಸಾಲಿಗಾಗಿ ಉದ್ಯೋಗಿನಿ ಯೋಜನೆಯಡಿ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅರ್ಹ ಮಹಿಳಾ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು 2021ರ ಸೆಪ್ಟೆಂಬರ್ 15ರೊಳಗಾಗಿ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.