ಸಿವಿಲ್ ಸಬ್‍ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ: ಲಿಖಿತ ಪರೀಕ್ಷೆಗೆ ತರಬೇತಿ ಹೆಸರು ನೋಂದಣಿಗೆ ಸೂಚನೆ

0
32

ಕಲಬುರಗಿ: ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿಂದ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಅವರು ತಿಳಿಸಿದ್ದಾರೆ.

ಆಸಕ್ತರು 2021ರ ಸೆಪ್ಟೆಂಬರ್ 7 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 0821-2515944 ಗೆ ಸಂಪರ್ಕಿಸಲು ಕೋರಲಾಗಿದೆ.

Contact Your\'s Advertisement; 9902492681
advertisement
advertisement

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here