ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಷನ್ ಇದರ ಸಂಯುಕ್ತ ಆಶ್ರಯದಲ್ಲಿ ಇಲಾಖೆಯ ವಸತಿ ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಆನ್ ಲೈನ್ ಮೂಲಕ ವಿವಿಧ ರೀತಿಯ ಉಚಿತ ತರಬೇತಿ ಕಾರ್ಯಗಾರ ನಡೆಯುತ್ತಿದ್ದು, ಯಶಸ್ವಿಯಾಗಿ ಸಾಗುತ್ತಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯರು ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ನಾಯಕತ್ವ ಗುಣ ವೃದ್ಧಿ, ತಂಡ ನಿರ್ವಹಣೆ ವಿಚಾರಗಳ ಕುರಿತು ತರಬೇತಿ ನೀಡಲಾಗುತ್ತಿದೆ.
ಶಿಕ್ಷಕರಲ್ಲಿ ಇಂಗ್ಲಿಷ್ ಭಾಷೆ ವೃದ್ಧಿ ಹಾಗೂ ಸಂವಹನ ಗುಣಮಟ್ಟ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡಲಾಗುತ್ತಿದೆ. ಶಿಕ್ಷಕರು ಮಾಡುವ ಪಾಠದಿಂದ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ಸುಲಲಿತವಾಗಿ ಅರ್ಥವಾಗಬೇಕು ಹಾಗೂ ಶಿಕ್ಷಕರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಇಂಗ್ಲಿಷ್ ಶಿಕ್ಷಕರಿಗೆ ಉತ್ತಮ ‘ಸ್ಪೋಕನ್ ಇಂಗ್ಲಿಷ್ ತರಬೇತಿ’ ಪೂರ್ಣಗೊಂಡ ಬಳಿಕ ಅವರು ಇನ್ನುಳಿದ ವಿವಿಧ ಭಾಷಾ ಹಾಗೂ ವಿಷಯಗಳ ಶಿಕ್ಷಕರಿಗೆ ತರಬೇತಿ ನೀಡಲಿದ್ದಾರೆ. ಇಂಗ್ಲಿಷ್ ಭಾಷಾ ಗುಣಮಟ್ಟ ವೃದ್ಧಿಯಾಗಿ ಉತ್ತಮ ಕಲಿಕಾ ವಾತವರಣ ಸೃಷ್ಟಿಯಾಗಬೇಕು ಎಂಬುವುದು ಇದರ ಉದ್ದೇಶವಾಗಿದೆ.
ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ವ್ಯಾಸಾಂಗ ಅಥವಾ ಉದ್ಯೋಗಕ್ಕೆ ಹೋಗುವಾಗ ಅವರಲ್ಲಿ ಇಂಗ್ಲಿಷ್ ಸಂವಹನ ಗುಣಮಟ್ಟ ಉತ್ತಮವಾಗಿ ಬೆಳೆಯಲು ಈ ತರಬೇತಿ ನೀಡಲಾಗುತ್ತಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…