ಬಿಸಿ ಬಿಸಿ ಸುದ್ದಿ

ಕುಡಿಯುವ ನೀರಿನ ಕಾಮಗಾರಿಗೆ ರಾಜುಗೌಡ ಚಾಲನೆ

ಸುರಪುರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗು ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ದೇವಿಕೇರಾ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ೧೩೨.೧೬ ಲಕ್ಷ ರೂಪಾಯಿಗಳ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ, ಅರಕೇರಾ (ಕೆ) ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ೨೧೯.೯ ಲಕ್ಷ ರೂಪಾಯಿಗಳ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ,ಬಾಚಿಮಟ್ಟಿ ಗ್ರಾಮದಲ್ಲಿ ೧೨.೫೦ ಲಕ್ಷ ರೂಪಾಯಿಗಳ ಜಲ ಶುದ್ಧೀಕರಣ ಘಟಕ ನಿರ್ಮಾಣ ಕಾಮಗಾರಿ ಹಾಗು ೨೧೯ ಲಕ್ಷ ರೂಪಾಯಿಗಳಲ್ಲಿ ಬಾಚಿಮಟ್ಟಿಯಿಂದ ಬೆನಕನಹಳ್ಳಿಗೆ ಹೋಗುವ ರಸ್ತೆ ಡಾಂಬರಿಕರಣ ಕಾಮಗಾರಿ, ಆಲ್ದಾಳ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ೨೪೦ ಲಕ್ಷ ರೂಪಾಯಿಗಳ ಪೈಪ್‌ಲೈನ್ ಕಾಮಗಾರಿ ಮತ್ತು ಕೆಕೆಆರ್‌ಡಿಬಿ ಅಡಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಜೊತೆಗೆ ನೂತನವಾಗಿ ನಿರ್ಮಿಸಲಾಗಿರುವ ೨ ಶಾಲಾ ಕೋಣೆಗಳ ಉದ್ಘಾಟನೆಯನ್ನು ನೆರವೇರಿಸಿದರು.

ಈ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು,ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಿ.ಅಲ್ಲದೆ ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ, ಉತ್ತಮವಾದ ಕಾಮಗಾರಿ ನಿರ್ಮಿಸಿದರೆ ಜನರು ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ.ಕಾಮಗಾರಿ ಕಳಪೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಹನುಮಪ್ಪ ನಾಯಕ (ತಾತಾ),ಮರಿಲಿಂಗಪ್ಪ ಕರ್ನಾಳ,ದೊಡ್ಡ ದೇಸಾಯಿ ದೇವರಗೋನಾಲ,ಸಾಹೇಬಗೌಡ ಪಾಟೀಲ್,ಮಹೇಶ ಪಾಟೀಲ್,ಬಸವರಾಜಸ್ವಾಮಿ ಸ್ಥಾವರಮಠ,ಭೀಮಣ್ಣ ಬೇವಿನಾಳ, ಶರಣು ನಾಯಕ,ರಂಗನಗೌಡ ಪಾಟೀಲ್,ಯಮನಪ್ಪ ಪೂಜಾರಿ,ಮಲ್ಲನಗೌಡ,ದೇವರಾಜ ಮಕಾಶಿ, ಪಿಡಿಒ ಸಂಗೀತ ಸಜ್ಜನ್,ಮಲ್ಕಣ್ಣ ಯಾದವ್,ಯಲ್ಲಪ್ಪ ಕುರಕುಂದಿ,ಬಿಇಒ ಮಹಾದೇವರಡ್ಡಿ,ರಮೇಶ ಬಾಚಿಮಟ್ಟಿ ಸೇರಿದಂತೆ ಅನೇಕರಿದ್ದರು.

advertisement
emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

8 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

19 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

19 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

21 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

21 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

21 hours ago